ಬೆಂಗಳೂರು: ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ, 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಆಹುತಿ
ಪಕ್ಕದಲ್ಲೇ ಇದ್ದ ಮತ್ತೊಂದು ಶೋರೂಂಗೂ ಬೆಂಕಿ ವ್ಯಾಪಿಸಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು: ಇಲ್ಲಿನ ಮಹದೇವಪುರ ಬಳಿಯ ವೈಟ್ ಫೀಲ್ಡ್ ಟ್ರಯಂಫ್ ಬೈಕ್ ಶೋರೂಂನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ ಐವತ್ತು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ನಿನ್ನೆ ರಾತ್ರಿ ಈ ಅವಘಡ ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್‌ಗಳು ಸುಟ್ಟು ಕರಕಲಾಗಿವೆ.
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಪಕ್ಕದಲ್ಲೇ ಇದ್ದ ಮತ್ತೊಂದು ಶೋರೂಂಗೂ ಬೆಂಕಿ ವ್ಯಾಪಿಸಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶೋರೂಂ ಮುಚ್ಚಿರುವಾಗ ಈ ಅವಘಡ ಸಂಭವಿಸಿದ್ದು, ಕಟ್ಟಡದಿಂದ ದಟ್ಟ ಹೊಗೆ ಹೊರಡುತ್ತಿರುವುದನ್ನು ನೋಡಿದ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



