ರಾಜ್ಯ

ಗದಗ: ಲಾಡ್ಜ್​ನಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆಗೆ ಶರಣು

ಇಂಜಿನಿಯರ್ ಶಂಕರಗೌಡ ಪಾಟೀಲ್(54) ಅವರು ಇಂದು ಬೆಳಗ್ಗೆ 7.30ಕ್ಕೆ ಮನೆಯಿಂದ ಹೊರಬಂದಿದ್ದು, ನಗರದ ಪಲ್ಲವಿ ಲಾಡ್ಜ್​ನ ರೂಮ್ ನಂಬರ್ 513ರಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗದಗ: ಲಾಡ್ಜ್​ನಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆಗೆ ಶರಣು
Published On :

ಗದಗ: ರಾಜ್ಯದಲ್ಲಿ ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶುಕ್ರವಾರ ಗದಗನ ಪಲ್ಲವಿ ಲಾಡ್ಜ್​ನಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಗದಗ ನಗರದ ನಿವಾಸಿಯಾಗಿರುವ ಇಂಜಿನಿಯರ್ ಶಂಕರಗೌಡ ಪಾಟೀಲ್(54) ಅವರು ಇಂದು ಬೆಳಗ್ಗೆ 7.30ಕ್ಕೆ ಮನೆಯಿಂದ ಹೊರಬಂದಿದ್ದು, ನಗರದ ಪಲ್ಲವಿ ಲಾಡ್ಜ್​ನ ರೂಮ್ ನಂಬರ್ 513ರಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಂಕರಗೌಡ ಪಾಟೀಲ್ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದು, ಈ ಸಾವು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮೃತ ಇಂಜಿನಿಯರ್ ಸಹೋದರ ಕೃಷ್ಣಗೌಡ ಅವರು, ಇದು ಆತ್ಮಹತ್ಯೆಯಲ್ಲ. ನೇಣು ಹಾಕಿ‌ ಕೊಲೆ ಮಾಡಿದ್ದಾರೆ. ಅವರಿಗೆ ಯಾವುದೇ ಸಾಲ‌ ಇಲ್ಲ. ಸಾಕಷ್ಟು ಆಸ್ತಿ ಇದೆ. ಶಂಕರಗೌಡ ಸಾಲಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವನಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.