ರಾಜ್ಯ

ಚಿಕ್ಕಬಳ್ಳಾಪುರ: ನಡುರಸ್ತೆಯಲ್ಲೇ ಕೊಚ್ಚಿ ಜೆಡಿಎಸ್​ ಮುಖಂಡನ ಬರ್ಬರ ಕೊಲೆ

ಎಂದಿನಂತೆ ವೆಂಕಟೇಶ್ ರಾತ್ರಿ 9 ಗಂಟೆ ಸುಮಾರಿಗೆ ತಮ್ಮನಾಯಕನಹಳ್ಳಿ ಗೇಟ್ ನಲ್ಲಿರುವ ಮೆಡಿಕಲ್ ಸ್ಟೋರ್‌ನಿಂದ ಮನೆಗೆ ತೆರಳುತ್ತಿದ್ದರು. ಈ ವೇಳೆ ಸಂಚು ರೂಪಿಸಿ, ಮನೆಯತ್ತ ಸ್ಕೂಟಿ ಮೂಲಕ ಹೊರಟಿದ್ದ ವೆಂಕಟೇಶ್‌ ಅವರಿಗೆ ಅಡ್ಡ ಬಂದು ಲಾಂಗ್‌ನಿಂದ ಬಲವಾಗಿ ಬೀಸಲಾಗಿದೆ.

ಚಿಕ್ಕಬಳ್ಳಾಪುರ: ನಡುರಸ್ತೆಯಲ್ಲೇ ಕೊಚ್ಚಿ ಜೆಡಿಎಸ್​ ಮುಖಂಡನ ಬರ್ಬರ ಕೊಲೆ
ವೆಂಕಟೇಶ್
Published On :

ಚಿಕ್ಕಬಳ್ಳಾಪುರ: ಜೆಡಿಎಸ್ ಮುಖಂಡನನ್ನು ರಸ್ತೆ ಮಧ್ಯದಲ್ಲೆ ಲಾಂಗ್‌ನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ.

ಹತ್ಯೆಗೊಳಗಾದ ವ್ಯಕ್ತಿಯನ್ನು ಗ್ರಾಮದ ವೆಂಕಟೇಶ್ ಅಲಿಯಾಸ್ ಗೋಲ್ಡ್ ವೆಂಕಟೇಶ್ (50) ಎಂದು ಗುರುತಿಸಲಾಗಿದೆ. ಎಂದಿನಂತೆ ವೆಂಕಟೇಶ್ ರಾತ್ರಿ 9 ಗಂಟೆ ಸುಮಾರಿಗೆ ತಮ್ಮನಾಯಕನಹಳ್ಳಿ ಗೇಟ್ ನಲ್ಲಿರುವ ಮೆಡಿಕಲ್ ಸ್ಟೋರ್‌ನಿಂದ ಮನೆಗೆ ತೆರಳುತ್ತಿದ್ದರು. ಈ ವೇಳೆ ಸಂಚು ರೂಪಿಸಿ, ಮನೆಯತ್ತ ಸ್ಕೂಟಿ ಮೂಲಕ ಹೊರಟಿದ್ದ ವೆಂಕಟೇಶ್‌ ಅವರಿಗೆ ಅಡ್ಡ ಬಂದು ಲಾಂಗ್‌ನಿಂದ ಬಲವಾಗಿ ಬೀಸಲಾಗಿದೆ.

ಎಡಗೈ ತೋಳಿನ ಭಾಗ ಕಟ್ ಆಗಿ, ಗಾಡಿ ಸಮೇತ ವೆಂಕಟೇಶ್ ನೆಲಕ್ಕೆ ಬಿದ್ದಿದ್ದಾರೆ. ಕೂಡಲೇ ಮನಸ್ಸೋ ಇಚ್ಛೆ ಮುಖಕ್ಕೆ ಲಾಂಗ್ ನಿಂದ ಕೊಚ್ಚಲಾಗಿದೆ. ಹೊಟ್ಟೆಯ ಭಾಗಕ್ಕೆ ಬಲವಾಗಿ ಬೀಸಲಾಗಿದೆ. ಪರಿಣಾಮ ವೆಂಕಟೇಶ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಹತ್ಯೆಯಾದವರ ಮಗ ಪೊಲೀಸರ ಬಳಿ, ತಮ್ಮ ತಂದೆ ತಮ್ಮೂರಿನ ರಸ್ತೆಯಲ್ಲಿರುವ ಬಾರ್ ಬಳಿ ಕೆಲವು ಅಕ್ಕ ಪಕ್ಕದ ಗ್ರಾಮದ ಯುವಕರು ಕುಡಿದು ಗಲಾಟೆ ಮಾಡುತ್ತಿದ್ದರು. ಮೂರು ದಿನಗಳ ಹಿಂದೆ ಬೈದು ಬುದ್ದಿವಾದ ಹೇಳಿದ್ದರು. ಹಾಗಾಗಿ ಆ ಹುಡುಗರು ಕೊಲೆ ಮಾಡಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಮತ್ತು ಎಸ್​ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.