ರಾಜ್ಯ

ಗದಗ: ಹೈಸ್ಕೂಲ್ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಕಾರು ಅಪಘಾತ; ಡಿವೈಡರ್ ಗೆ ಡಿಕ್ಕಿ ಹೊಡೆದು ಇಬ್ಬರು ದಾರುಣ ಸಾವು

ಹುಲಕೋಟಿ ರಾಜೇಶ್ವರಿ ವಿದ್ಯಾನಿಕೇತನ ಶಾಲೆಯಲ್ಲಿ ವಿದ್ಯಾರ್ಥಿಗಳು 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಲ್ಲಿ ಓರ್ವ ಕಾರು ಚಾಲನೆ ಮಾಡುತ್ತಿದ್ದ ಎನ್ನಲಾಗಿದೆ, ವೇಗವಾಗಿ ಬಂದ ಕಾರು, ಡಿಕ್ಕಿ ಹೊಡೆದಿದೆ.

ಗದಗ: ಹೈಸ್ಕೂಲ್ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಕಾರು ಅಪಘಾತ; ಡಿವೈಡರ್ ಗೆ ಡಿಕ್ಕಿ ಹೊಡೆದು ಇಬ್ಬರು ದಾರುಣ ಸಾವು
ಗದಗದಲ್ಲಿ ಕಾರು ಅಪಘಾತ
Published On :

ಗದಗ: ಹೈಸ್ಕೂಲ್‌ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಕಾರು ಅಪಘಾತವಾಗಿ ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಗದಗ ತಾಲೂಕಿನ ಹುಲಕೋಟಿ ರೂರಲ್ ಇಂಜಿನಿಯರಿಂಗ್ ಕಾಲೇಜ್ ಬಳಿ ಘಟನೆ ನಡೆದಿದೆ.

ಹುಲಕೋಟಿ ರಾಜೇಶ್ವರಿ ವಿದ್ಯಾನಿಕೇತನ ಶಾಲೆಯಲ್ಲಿ ವಿದ್ಯಾರ್ಥಿಗಳು 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಲ್ಲಿ ಓರ್ವ ಕಾರು ಚಾಲನೆ ಮಾಡುತ್ತಿದ್ದ ಎನ್ನಲಾಗಿದೆ, ವೇಗವಾಗಿ ಬಂದ ಕಾರು, ಡಿಕ್ಕಿ ಹೊಡೆದಿದೆ. ಮಹಮ್ಮದ್ ಮುಜಾವರ್ (16), ಸಂಜೀವ್ ಗಿರಡ್ಡಿ (16) ಮೃತಪಟ್ಟಿದ್ದಾರೆ. ಆಶಿಸ್ ಗುಂಡುರ್ (16) ಸೇರಿದಂತೆ ಮತ್ತೋರ್ವ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ.

ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿ ತಡರಾತ್ರಿ ಬರುವ ವೇಳೆ ಅಪಘಾತ ಸಂಭವಿಸಿದೆ. ನಾಲ್ಕು ಜನ ವಿದ್ಯಾರ್ಥಿಗಳು ಮಾತ್ರ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಗ್ಯಾದರಿಂಗ್ ಡ್ಯಾನ್ಸ್ ಮುಗಿಸಿಕೊಂಡು ಜೋಶ್‌ನಲ್ಲಿ ವಾಪಸ್‌ ಆಗುತ್ತಿದ್ದರು. ಅತಿಯಾದ ವೇಗವೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ.

ಮೃತರ ದೇಹಗಳು ಹಾಗೂ ಓರ್ವ ಗಾಯಾಳು ಗದಗ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಮತ್ತೋರ್ವ ಗಾಯಾಳು ವಿದ್ಯಾರ್ಥಿಯನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.