ಮಗು ಅಳುತ್ತಿದೆ ಪಟಾಕಿ ಸಿಡಿಸದಿರಿ ಎಂದ ವ್ಯಕ್ತಿಗೆ ನೆರೆಮನೆಯವರಿಂದ ಹಿಗ್ಗಾಮುಗ್ಗಾ ಥಳಿತ: ಪ್ರಕರಣ ದಾಖಲು
ಮಂಗಳವಾರ ರಾತ್ರಿ 11.30 ರಿಂದ 11.59 ರ ನಡುವೆ ಘಟನೆ ನಡೆದಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರು: 25 ದಿನಗಳ ಹಸುಗೂಸು ಭಯಭೀತಗೊಂಡು ಅಳುತ್ತಲಿದ್ದು ಪಟಾಕಿ ಸಿಡಿಸದಂತೆ ಮನವಿ ಮಾಡಿಜದ ವ್ಯಕ್ತಿಗೆ ನೆರೆಹೊರೆಯವರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಗರದ ಟಿ.ದಾಸರಹಳ್ಳಿಯಲ್ಲಿ ಮಂಗಳವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಟಿ. ದಾಸರಹಳ್ಳಿಯ ಪ್ರಶಾಂತ್ ನಗರದ ನಿವಾಸಿ ಪಿ.ಆರ್. ನವೀನ್ ಕುಮಾರ್ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ. ಮಂಗಳವಾರ ರಾತ್ರಿ 11.30 ರಿಂದ 11.59 ರ ನಡುವೆ ಘಟನೆ ನಡೆದಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪಟಾಕಿ ಸಿಡಿತದ ಶಬ್ಧಕ್ಕೆ ಮಗು ಅಳಲು ಆರಂಭಿಸಿತ್ತು. ಹೀಗಾಗಿ ಪಟಾಕಿ ಸಿಡಿಸದಂತೆ ಮನವಿ ಮಾಡಿಕೊಂಡಿದ್ದೆ. ಕಳೆದ 18 ತಿಂಗಳುಗಳಿಂದ ಕುಟುಂಬದೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದೇನೆ. ನನ್ನ ಮೇಲೆ ಹಲ್ಲೆ ನಡೆಸಿದವರು ಇಲ್ಲಿನ ಸ್ವಂತ ಮನೆ ಹೊಂದಿರುವವರಾಗಿದ್ದಾರೆ. ನಾಲ್ವರು ಮಹಿಳೆಯರು ಸೇರಿದಂತೆ 7 ಮಂದಿ ನನ್ನ ಮೇಲ ಹಲ್ಲೆ ನಡೆಸಿದ್ದು, ನನ್ನ ಹೆಬ್ಬರಳಿನ ಮೂಳೆ ಮುರಿತವಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇನೆ. ಘಟನೆ ವೇಳೆ ನನ್ನ ನೆರವಿಗೆ ಬಂದ ನನ್ನ ಅತ್ತೆಗೂ ಆರೋಪಿಗಳು ಥಳಿಸಿದ್ದಾರೆಂದು ಕುಮಾರ್ ಅವರು ಹೇಳಿದ್ದಾರೆ.
7 ಮಂದಿಯ ಪೈಕಿ ಕೆಲವರು ಘಟನೆ ವೇಳೆ ಮದ್ಯದ ಅಮಲಿನಲ್ಲಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಘಟನೆ ಸಂಬಂಧ ಆರೋಪಿಗಳ ವಿರುದ್ಧ ಬಿಎನ್‌ಎಸ್ 115(2) ಜೊತೆಗೆ ಬಿಎನ್‌ಎಸ್‌ನ ಇತರ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



