ಬಸ್ ಪ್ರಯಾಣ ದರ ಏರಿಕೆ: ಪರಿಷ್ಕೃತ ಬೆಲೆ ಮಧ್ಯರಾತ್ರಿಯಿಂದಲೇ ಜಾರಿ
ಕೆಎಸ್ಆರ್ ಟಿಸಿ ಪಾಸ್ 150 ರಿಂದ 200 ರೂಪಾಯಿವರೆಗೆ ಹೆಚ್ವಳವಾಗಿದ್ದರೆ, ಬಿಎಂಟಿಸಿ ಪಾಸ್ ದರ 100 ರಿಂದ 150 ರೂಪಾಯಿವರೆಗೆ ಏರಿಕೆ ಆಗಿದೆ.

ಬೆಂಗಳೂರು: ಹೊಸ ವರ್ಷದ (New Year) ಹೊಸ್ತಿಲಲ್ಲೇ ಬಸ್ ದರ ಏರಿಕೆ ಮಾಡಿದ್ದ ರಾಜ್ಯ ಸರ್ಕಾರದ ಪರಿಷ್ಕೃತ ದರ ಇಂದು ಭಾನುವಾರ ಮಧ್ಯರಾತ್ರಿಯಿಂದ ಜಾರಿಗೆ ಬಂದಿದೆ.
ಸಾರಿಗೆ ಇಲಾಖೆ ಕೆಎಸ್ಆರ್ಟಿಸಿ (KSRTC), ಬಿಎಂಟಿಸಿ (BMTC), ಎನ್ಡಬ್ಲೂಕೆಆರ್ಟಿಸಿ (NWKRTC), ಕೆಕೆಆರ್‌ಟಿಸಿ (KKRTC) ಬಸ್ಗಳ ಟಿಕೆಟ್ ದರ ಪರಿಷ್ಕರಣೆಗೊಳಿಸಿದ್ದು, ಶೇ 15 ರಷ್ಟು ದರ ಹೆಚ್ಚು ಮಾಡಿ ಆದೇಶ ಹೊರಡಿಸಿದೆ. ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಯಾಗಿದೆ. ಬಸ್ ಪ್ರಯಾಣಿಕರಿಗೆ ಹೊಸ ಟಿಕೆಟ್ ದರದ ಬಿಸಿ ತಟ್ಟಿದೆ.
ಸಾರಿಗೆ ಇಲಾಖೆ ನೂತನ ದರಪಟ್ಟಿ ಬಿಡುಗಟೆ ಮಾಡಿದೆ. 50 ರಿಂದ 100 ರೂಪಾಯಿಯಷ್ಟು ಟಿಕೆಟ್ ದರ ಹೆಚ್ಚಳವಾಗಿದೆ. ಕೆಎಸ್ಆರ್ ಟಿಸಿ ಪಾಸ್ 150 ರಿಂದ 200 ರೂಪಾಯಿವರೆಗೆ ಹೆಚ್ವಳವಾಗಿದ್ದರೆ, ಬಿಎಂಟಿಸಿ ಪಾಸ್ ದರ 100 ರಿಂದ 150 ರೂಪಾಯಿವರೆಗೆ ಏರಿಕೆ ಆಗಿದೆ.
ಬಸ್ ದರ ಏರಿಕೆಯ ನಿರ್ಧಾರಕ್ಕೆ ವಿಪಕ್ಷಗಳು, ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿರುವ ನಡುವೆಯೇ ಸರ್ಕಾರ ಕೊನೆಗೂ ಬಸ್ ಪ್ರಯಾಣ ದರ ಏರಿಕೆ ಮಾಡಿದೆ.
ಶೇ.42ರಷ್ಟು ದರ ಏರಿಕೆ ಪ್ರಸ್ತಾಪ
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳಲ್ಲಿ ಉತ್ತಮ ಬಸ್ ಸೇವೆ ನೀಡುವುದು ಸೇರಿ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕಳೆದ ಕೆಲ ತಿಂಗಳ ಹಿಂದೆಯೇ ಪ್ರಯಾಣ ದರ ಏರಿಕೆ ಪ್ರಸ್ತಾವ ಸಲ್ಲಿಕೆಯಾಗಿತ್ತು. ಕೆಎಸ್ಸಾರ್ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ಶೇ.33ರಷ್ಟು ಹಾಗೂ ಬಿಎಂಟಿಸಿ ಪ್ರಯಾಣ ದರ ಶೇ.42ರಷ್ಟು ಹೆಚ್ಚಳಕ್ಕೆ ಅನುಮತಿ ನೀಡಲು ಕೋರಿದ್ದವು. ಆದರೆ, ಅದರಲ್ಲಿ ಶೇ.15ರಷ್ಟು ಬಸ್ ಪ್ರಯಾಣ ದರಕ್ಕೆ ಅನುಮತಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.
ವೇಗದೂತ ಸಾರಿಗೆಗೆ ರಾಜ್ಯದಲ್ಲಿ ಟಿಕೆಟ್ ದರ 7 ರೂ.ಗಳಿಂದ 115 ರೂಪಾಯಿ ವರೆಗೆ ಹೆಚ್ಚಳವಾಗಿದೆ. ಬೀದರ್ ನಿಂದ ಬೆಂಗಳೂರಿಗೆ ಬರಬೇಕಾದರೆ 115 ರೂಪಾಯಿ ಹೆಚ್ಚಿಗೆ ನೀಡಬೇಕು. ಕಲಬುರಗಿಯಿಂದ ಬೆಂಗಳೂರಿಗೆ ಬರಬೇಕಾದರೆ 99 ರೂಪಾಯಿ ಹೆಚ್ಚು ನೀಡಬೇಕಿದೆ. ರಾಮನಗರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಜನರು ಅತ್ಯಂತ ಕನಿಷ್ಠ ಕ್ರಮವಾಗಿ 7 ರೂ. ಹಾಗೂ ಹಾಗೂ 9 ರೂ. ಹೆಚ್ಚಿಗೆ ನೀಡಬೇಕಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



