ರಾಜ್ಯ

Chamarajanagar: ಹೃದಯಾಘಾತಕ್ಕೆ 3ನೇ ತರಗತಿ ವಿದ್ಯಾರ್ಥಿನಿ ಸಾವು

ಹೃದಯಾಘಾತಕ್ಕೆ ಚಿಕ್ಕ ಮಕ್ಕಳು ಬಲಿಯಾಗುತ್ತಿರುವುದು ಆತಂಕದ ವಿಷಯವಾಗಿದೆ. ಇನ್ನು ಇದ್ದ ಒಬ್ಬಳೆ ಮಗಳನ್ನು ಕಳೆದುಕೊಂಡ ಪೋಷಕರು ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ಎಂತಹವರ ಮನ ಕಲಕುವಂತಿದೆ.

Chamarajanagar: ಹೃದಯಾಘಾತಕ್ಕೆ 3ನೇ ತರಗತಿ ವಿದ್ಯಾರ್ಥಿನಿ ಸಾವು
ವಿದ್ಯಾರ್ಥಿನಿ ತೇಜಸ್ವಿನಿ
Published On :

ಚಾಮರಾಜನಗರ: ಚಾಮರಾಜನಗರದಲ್ಲಿ ದಾರುಣ ಘಟನೆಯೊಂದು ನಡೆದಿದ್ದು ಏಕಾಏಕಿ ಕುಸಿದುಬಿದ್ದು ಮೂರನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿದ್ದು ಇದ್ದ ಒಬ್ಬಳೆ ಮಗಳನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಚಾಮರಾಜನಗರದ ಸೇಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಬದನಗುಪ್ಪೆ ಗ್ರಾಮದ ನಿವಾಸಿ ಲಿಂಗರಾಜು, ಶ್ರುತಿ ದಂಪತಿಯ ಏಕೈಕ ಪುತ್ರಿ ತೇಜಸ್ವಿನಿ ಏಕಾಏಕಿ ಕುಸಿದುಬಿದ್ದಿದ್ದಳು. ಕೂಡಲೇ ತೇಜಸ್ವಿನಿಯನ್ನು ಶಾಲಾ ಸಿಬ್ಬಂದಿ ಜೆಎಸ್ಎಸ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ದುರದೃಷ್ಟವಶಾತ್ ಅದಾಗಲೇ ತೇಜಸ್ವಿನಿ ಮೃತಪಟ್ಟಿದ್ದಳು. ಇನ್ನು ತೇಜಸ್ವಿನಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ವಯಸ್ಕರು ಬಲಿಯಾಗುತ್ತಿದ್ದರು. ಆದರೆ ಇದೀಗ ಹೃದಯಾಘಾತಕ್ಕೆ ಚಿಕ್ಕ ಮಕ್ಕಳು ಬಲಿಯಾಗುತ್ತಿರುವುದು ಆತಂಕದ ವಿಷಯವಾಗಿದೆ. ಇನ್ನು ಇದ್ದ ಒಬ್ಬಳೆ ಮಗಳನ್ನು ಕಳೆದುಕೊಂಡ ಪೋಷಕರು ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ಎಂತಹವರ ಮನ ಕಲಕುವಂತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.