ಮಹಾ ಕುಂಭಮೇಳ: ಜನವರಿ 8 ರಂದು ಬೆಂಗಳೂರಿನಿಂದ ಪ್ರಯಾಗ್‌ರಾಜ್‌ಗೆ ವಿಶೇಷ ರೈಲು
ರೈಲು ನಂ.06577 ಕುಂಭಮೇಳ ಎಕ್ಸ್‌ಪ್ರೆಸ್ ವಿಶೇಷ ರೈಲು ಜನವರಿ 8 ರಂದು SMVT ಬೆಂಗಳೂರಿನಿಂದ 23:50 ಕ್ಕೆ ಹೊರಟು ಜನವರಿ 10 ರಂದು 17:15 ಕ್ಕೆ ಪ್ರಯಾಗರಾಜ್‌ಗೆ ತಲುಪಲಿದೆ.

ಬೆಂಗಳೂರು: ಹೆಚ್ಚಿದ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ಜನವರಿ 8 ರಂದು ಬೆಂಗಳೂರು ಮತ್ತು ಪ್ರಯಾಗರಾಜ್ ನಡುವೆ ವಿಶೇಷ ಏಕಮಾರ್ಗ ಕುಂಭಮೇಳ ಎಕ್ಸ್‌ಪ್ರೆಸ್ ರೈಲು ಹೊರಡಲಿದೆ ಎಂದು ನೈಋತ್ಯ ರೈಲ್ವೆ(SWR) ಸೋಮವಾರ ತಿಳಿಸಿದೆ.
ರೈಲು ನಂ.06577 ಕುಂಭಮೇಳ ಎಕ್ಸ್‌ಪ್ರೆಸ್ ವಿಶೇಷ ರೈಲು ಜನವರಿ 8 ರಂದು SMVT ಬೆಂಗಳೂರಿನಿಂದ 23:50 ಕ್ಕೆ ಹೊರಟು ಜನವರಿ 10 ರಂದು 17:15 ಕ್ಕೆ ಪ್ರಯಾಗರಾಜ್‌ಗೆ ತಲುಪಲಿದೆ ಎಂದು SWR ಹೊರಡಿಸಿದ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಏಕಮಾರ್ಗ ವಿಶೇಷ ಎಕ್ಸ್‌ಪ್ರೆಸ್ ರೈಲು ವೈಟ್ ಫೀಲ್ಡ್, ಬಂಗಾರಪೇಟೆ, ಜೋಲಾರ್ ಪೆಟ್ಟೈ, ಕಟಪಾಡಿ, ಪೆರಂಬೂರು, ಗುಡೂರು, ವಿಜಯವಾಡ, ವಾರಂಗಲ್, ಬಲ್ಹರ್ಷಾ, ಚಂದ್ರಾಪುರ, ಸೇವಾಗ್ರಾಮ್, ನಾಗ್ಪುರ, ಇಟಾರ್ಸಿ, ಜಬಲ್ಪುರ್, ಸತ್ನಾ ಮತ್ತು ಮಾಣಿಕ್ಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.
ಈ ರೈಲು 14 ಜನರಲ್ ಸೆಕೆಂಡ್ ಕ್ಲಾಸ್ ಬೋಗಿಗಳು, 4 ಸ್ಲೀಪರ್ ಬೋಗಿಗಳು ಮತ್ತು 2 ಲಗೇಜ್ ಕಂ ಬ್ರೇಕ್ ವ್ಯಾನ್‌ಗಳು ಸೇರಿ 20 ಬೋಗಿಗಳನ್ನು ಒಳಗೊಂಡಿರುತ್ತದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



