ಬೆಂಗಳೂರು: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಬಿಡುಗಡೆ, ಒಟ್ಟು 1.02 ಕೋಟಿ ಮತದಾರರು
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸೋಮವಾರ ಪರಿಷ್ಕೃತ ಮತದಾರರ ಪಟ್ಟಿ ಬಿಡುಗಡೆ ಮಾಡಿದ ಅವರು 1,02,64,714 ಮತದಾರರಲ್ಲಿ 52,80,287 ಪುರುಷರು, 49,82,589 ಮಹಿಳೆಯರು ಮತ್ತು 1,838 ತೃತೀಯ ಲಿಂಗಿಗಳು ಇದ್ದಾರೆ ಎಂದರು.

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಬಿಡುಗಡೆಯಾಗಿದ್ದು, ಒಟ್ಟು 1,02,64,714 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸೋಮವಾರ ಪರಿಷ್ಕೃತ ಮತದಾರರ ಪಟ್ಟಿ ಬಿಡುಗಡೆ ಮಾಡಿದ ಅವರು 1,02,64,714 ಮತದಾರರಲ್ಲಿ 52,80,287 ಪುರುಷರು, 49,82,589 ಮಹಿಳೆಯರು ಮತ್ತು 1,838 ತೃತೀಯ ಲಿಂಗಿಗಳು ಇದ್ದಾರೆ ಎಂದರು.
ನಗರದ ಎಲ್ಲ 28 ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ವಾರ್ಡ್ ಕಚೇರಿಗಳಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಸಾರ್ವಜನಿಕರು ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್ www.ceokarnataka.kar.nic.in -- ಮತ್ತು BBMP ವೆಬ್‌ಸೈಟ್ www.bbmp.gov.in ಗಳಲ್ಲಿ ತಮ್ಮ ಹೆಸರನ್ನು ಪರಿಶೀಲಿಸಿಕೊಳ್ಳಬಹುದು.
ಮೊಬೈಲ್ ಫೋನ್‌ನಲ್ಲಿ VHA (ಮತದಾರರ ಸಹಾಯವಾಣಿ ಅಪ್ಲಿಕೇಶನ್) ಅಥವಾ ವೆಬ್ ಪೋರ್ಟಲ್ voters.eci.gov.in ನಲ್ಲಿಯೂ ಮಾಹಿತಿ ಪಡೆಯಬಹುದು. e-EPIC ಡೌನ್‌ಲೋಡ್ ಮಾಡಿಕೊಂಡು, ಮತಗಟ್ಟೆ ಮತ್ತು ಮತದಾನದ ಶೇಕಡಾವಾರು ಮಾಹಿತಿಯಂತಹ ಇತರ ಮಾಹಿತಿಯನ್ನು ಪಡೆಯಬಹುದು. ನಗರದ 1.02 ಕೋಟಿ ಮತದಾರರ ಪೈಕಿ 95,391 ಯುವ ಮತದಾರರಿದ್ದಾರೆ ಎಂದು ಮುಖ್ಯ ಆಯುಕ್ತರು ತಿಳಿಸಿದ್ದಾರೆ.
2,294 ಅನಿವಾಸಿ ಭಾರತೀಯ ಮತದಾರರಿದ್ದು, 1,712 ಸೇವಾ ಮತದಾರರು ಮತ್ತು 32,505 ವಿಶೇಷ ಸಾಮರ್ಥ್ಯದ ಮತದಾರರಿದ್ದಾರೆ. ಸಾರ್ವಜನಿಕರು ವೆಬ್ ಪೋರ್ಟಲ್ ಅಥವಾ ಆ್ಯಪ್‌ನಲ್ಲಿ ಪರಿಷ್ಕೃತ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಬಹುದು. ಯಾವುದೇ ಬದಲಾವಣೆಗಳನ್ನು ಮಾಡಬೇಕಾದರೆ, ನಮೂನೆ 6, 7 ಮತ್ತು 8 ಇತ್ಯಾದಿಗಳನ್ನು ಬಳಸಿಕೊಂಡು ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ ಎಂದು ಗಿರಿನಾಥ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



