ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಲೆಲ್ಲ ನಕ್ಸಲರಿಗೆ, ಉಗ್ರರಿಗೆ ಸುಗ್ಗಿ: ಶರಣಾಗತಿ ಪ್ಯಾಕೇಜ್ ಗೆ ಸುನೀಲ್ ಕುಮಾರ್ ಆಕ್ಷೇಪ
ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ? ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಪಷ್ಟಪಡಿಸಬೇಕು ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ-ಉಗ್ರರಿಗೆ ಸುಗ್ಗಿಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಆರು ಮಂದಿ ನಕ್ಸಲರಿಗೆ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಅವರು ಸಾಮಾಜಿಕ ಮಾಧ್ಯದ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ? ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಪಷ್ಟಪಡಿಸಬೇಕು ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ - ಉಗ್ರರಿಗೆ ಸುಗ್ಗಿಯಾಗಿದೆ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯನವರೇ? ಇದರಿಂದ ಪೊಲೀಸರ ಆತ್ಮ ಸ್ಥೈರ್ಯ ಏನಾಗಬೇಡ? ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


