Video: ರಸ್ತೆ ಮೇಲೆ ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿದ THAR ಚಾಲಕ, ಸ್ಥಳದಲ್ಲೇ ಸಾವು!
ಬೆಂಗಳೂರಿನ ಜೆ.ಪಿ. ನಗರದ 8ನೇ ಹಂತ ಶೇಖರ್ ನಗರದಲ್ಲಿ ಡಿಸೆಂಬರ್ 31ರಂದು ಈ ಘಟನೆ ನಡೆದಿದ್ದು, ತಡವಾಗಿ ಈ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರು: ರಸ್ತೆ ಮೇಲೆ ಮಲಗಿದ್ದ ಬೀದಿನಾಯಿ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿರುವ ಧಾರುಣ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ.
ಬೆಂಗಳೂರಿನ ಜೆ.ಪಿ. ನಗರದ 8ನೇ ಹಂತ ಶೇಖರ್ ನಗರದಲ್ಲಿ ಡಿಸೆಂಬರ್ 31ರಂದು ಈ ಘಟನೆ ನಡೆದಿದ್ದು, ತಡವಾಗಿ ಈ ಘಟನೆ ಬೆಳಕಿಗೆ ಬಂದಿದೆ. ಬಿಸಿಲಿನಲ್ಲಿ ಬೀದಿನಾಯಿಗಳ ಗುಂಪು ರಸ್ತೆ ಮೇಲೆ ಮಲಗಿತ್ತು. ಈ ವೇಳೆ ಅದೇ ರಸ್ತೆಯಲ್ಲಿ ಕೆಂಪು ಬಣ್ಣದ ಥಾರ್ ಕಾರು ಬಂದಿತ್ತು. ಆದರೆ ರಸ್ತೆ ಮಧ್ಯೆ ಮಲಗಿದ್ದ ನಾಯಿ ಮೇಲೆ ಕಾರು ಚಾಲಕ ಉದ್ದೇಶಪೂರ್ವಕವಾಗಿಯೇ ಕಾರು ಹತ್ತಿಸಿದ್ದಾನೆ.
ಕಾರು ಹತ್ತುತ್ತಿದ್ದಂತೆಯೇ ಕಿರುಚಾಡಿದ ನಾಯಿ ಕ್ಷಣಾರ್ಧಲ್ಲಿ ರಕ್ತದ ಮಡುವಿನಲ್ಲಿ ಪ್ರಾಣ ಬಿಟ್ಟಿದೆ. ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ವಿಡಿಯೋ ನೋಡಿದರೆ ಉದ್ದೇಶಪೂರ್ವಕವಾಗಿಯೇ ಕಾರಿನ ಮಾಲೀಕ ಈ ಕೃತ್ಯವನ್ನು ಎಸಗಿದ್ದಾನೆ ಎಂದು ಪ್ರಾಣಿ ಪ್ರಿಯರು ಆರೋಪ ಮಾಡಿದ್ದಾರೆ.
ಈ ವಿಡಿಯೋ ನಾಯಿ ಹರಿಸಿದ ಮನೆಯ ಮುಂದಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು ಸ್ಥಳೀಯ ಪ್ರಾಣಿ ಪ್ರಿಯರಿಗೆ ಹಂಚಿಕೊಂಡಿದ್ದು, ನಾಯಿ ಮೇಲೆ ಕಾರು ಹತ್ತಿಸಿದವನಿಗೆ ಸರಿಯಾಗಿ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



