ರಾಜ್ಯ

ರಾಮನಗರ: ಬೈಕ್‌ಗೆ KSRTC ಬಸ್‌ ಡಿಕ್ಕಿ; ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಮೂವರು ದುರ್ಮರಣ

ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಮನಗರ: ಬೈಕ್‌ಗೆ KSRTC ಬಸ್‌ ಡಿಕ್ಕಿ; ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಮೂವರು ದುರ್ಮರಣ
ಪ್ರಾತಿನಿಧಿಕ ಚಿತ್ರ
Published On :

ರಾಮನಗರ: ಗುರುವಾರ ಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಮಹಿಳೆಯೊಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಮನಗರ ಮತ್ತು ಕನಕಪುರ ನಡುವಿನ ಅಚ್ಚಲು ಕ್ರಾಸ್ ಬಳಿಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೈಕ್ ಸವಾರ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಕನಕಪುರದಿಂದ ರಾಮನಗರಕ್ಕೆ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.