ತುಮಕೂರು: ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹತ್ಯೆ
ತ್ರಿಶಾಲ್ ತನ್ನ ತಾಯಿ ಶಂಕುತಲಾ ಜೊತೆ ವಿಜಯನಗರದ 2 ನೇ ಮುಖ್ಯ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ.

ತುಮಕೂರು: ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ ಪುತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರಿನ ವಿಜಯನಗರದಲ್ಲಿ ನಡೆದಿದೆ.
ತ್ರಿಶಾಲ್ ತನ್ನ ತಾಯಿ ಶಂಕುತಲಾ ಜೊತೆ ವಿಜಯನಗರದ 2 ನೇ ಮುಖ್ಯ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ. ಸರ್ವೋದಯ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ತ್ರಿಶಾಲ್ (13) ಇಂದು ಬೆಳಗ್ಗೆ ಮನೆಯಲ್ಲಿ ಯಾರು ಇಲ್ಲದ ವೇಳೆ ಶಾಲಾ ಸಮವಸ್ತ್ರದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪಾರಿವಾಳದ ಬೆಟ್ಟಿಂಗ್ ವಿಚಾರಕ್ಕೆ ಸ್ನೇಹಿತರ ಜೊತೆ ಗಲಾಟೆ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಡೆತ್ ನೋಟ್ ಇದೆ ಎನ್ನಲಾಗಿದ್ದು ಬಹಿರಂಗಗೊಂಡಿಲ್ಲ. ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮೃತದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಕಾರ್ಯಕರ್ತೆಯಾಗಿರುವ ಶಕುಂತಲಾ ನಟರಾಜ್ ಅವರು ಸದಾ ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟಿವ್ ಆಗಿದ್ದಾರೆ. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯನವರ ಕುಟುಂಬದ ಬಗ್ಗೆ ಟೀಕಿಸಿ ಬಂಧನಕ್ಕೊಳಗಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


