ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ನ್ಯಾಯಾಲಯಕ್ಕೆ ಹಾಜರು; ಮುಂದಿನ ವಿಚಾರಣೆ ಫೆಬ್ರವರಿ 25ಕ್ಕೆ ಮುಂದೂಡಿಕೆ
ಎಲ್ಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾದ ಬಳಿಕ ಹಾಜರಿ ಪಡೆದುಕೊಂಡ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಿ ಆದೇಶಿಸಿದರು.

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಇಂದು ಶುಕ್ರವಾರ ಬೆಂಗಳೂರಿನ ಸಿಸಿಎಚ್ 57ರ ಕೋರ್ಟ್‌ಗೆ ವಿಚಾರಣೆಗೆ ಹಾಜರಾಗಿದ್ದಾರೆ. ಜಾಮೀನು ದೊರೆತ ಬಳಿಕ ಇದೇ ಮೊದಲ ಬಾರಿಗೆ ರೇಣುಕಾ ಸ್ವಾಮಿ ಕೊಲೆ ಆರೋಪಿಗಳೆಲ್ಲ ಒಟ್ಟಿಗೆ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
ಜಾಮೀನು ನೀಡುವ ಸಮಯದಲ್ಲಿ ಪ್ರತಿ ತಿಂಗಳು ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಲಾಗಿತ್ತು. ಹಾಗಾಗಿ ಇಂದು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಮೊದಲೇ ಬಂದಿದ್ದ ಪವಿತ್ರಾ ಗೌಡ, ತಮ್ಮ ವಕೀಲರೊಂದಿಗೆ ಕೋರ್ಟ್ ಆವರಣದಲ್ಲಿ ಚರ್ಚಿಸುತ್ತಾ ನಿಂತಿದ್ದರು. ಇತರೆ ಆರೋಪಿಗಳು ಸಹ ತಮ್ಮ ತಮ್ಮ ವಕೀಲರೊಡನೆ ಕೋರ್ಟ್‌ಗೆ ಹಾಜರಾಗಿದ್ದರು.
ದರ್ಶನ್, ನಟ ಧನ್ವೀರ್ ಜೊತೆ ಕಾರಿನಲ್ಲಿ ನ್ಯಾಯಾಲಯಕ್ಕೆ ಆಗಮಿಸಿದರು. ಅವರೊಟ್ಟಿಗೆ ವಕೀಲರು ಸಹ ಇದ್ದರು. ದರ್ಶನ್, ನ್ಯಾಯಾಲಯದ ಬಳಿ ಬಂದಾಗ ಜನ ಮತ್ತು ಮಾಧ್ಯಮಗಳು ಸುತ್ತುವರೆದರು. ಎಲ್ಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾದ ಬಳಿಕ ಹಾಜರಿ ಪಡೆದುಕೊಂಡ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಿ ಆದೇಶಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



