ರಾಜ್ಯ

ಧಾರವಾಡ: ಆಸ್ತಿ ವಿವಾದ; ತಂದೆ-ಮಲತಾಯಿಯನ್ನು ಕೊಂದ ಮಗ!

ಆರೋಪಿ ಗಂಗಾಧರಪ್ಪ ತಮ್ಮ ಒಡೆತನದ 2 ಎಕರೆ ಆಸ್ತಿಗಾಗಿ ತಂದೆಯೊಂದಿಗೆ ಜಗಳವಾಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮದ್ಯ ವ್ಯಸನಿಯಾಗಿದ್ದ ಆತ ದಿನನಿತ್ಯ ತನ್ನ ಕುಟುಂಬದೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ.

ಧಾರವಾಡ: ಆಸ್ತಿ ವಿವಾದ; ತಂದೆ-ಮಲತಾಯಿಯನ್ನು ಕೊಂದ ಮಗ!
ಸಾಂದರ್ಭಿಕ ಚಿತ್ರ
Published On :

ಧಾರವಾಡ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ತನ್ನ ತಂದೆ ಮತ್ತು ಮಲತಾಯಿಯನ್ನು ಕೊಂದ ಘಟನೆ ಧಾರವಾಡ ಜಿಲ್ಲೆಯ ಕುಸುಗಲ್ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ಅಶೋಕಪ್ಪ ಕೊಬ್ಬಣ್ಣನವರ್ ಮತ್ತು ಅವರ ಪತ್ನಿ ಶಾರದಮ್ಮ ಎಂದು ಗುರುತಿಸಲಾಗಿದೆ.

ಆರೋಪಿ ಗಂಗಾಧರಪ್ಪ ತಮ್ಮ ಒಡೆತನದ 2 ಎಕರೆ ಆಸ್ತಿಗಾಗಿ ತಂದೆಯೊಂದಿಗೆ ಜಗಳವಾಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮದ್ಯ ವ್ಯಸನಿಯಾಗಿದ್ದ ಆತ ದಿನನಿತ್ಯ ತನ್ನ ಕುಟುಂಬದೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ.

ಶುಕ್ರವಾರ ಮಧ್ಯಾಹ್ನ ಕುಡಿದು ಮನೆಗೆ ಬಂದಿದ್ದು, ಜಗಳ ಆರಂಭಿಸಿದ್ದಾನೆ. ಆತನ ಬೇಡಿಕೆಗೆ ಪೋಷಕರು ಒಪ್ಪದಿದ್ದಾಗ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಅಶೋಕಪ್ಪನ ಮೊದಲ ಹೆಂಡತಿ ಶಾಂತಮ್ಮ ಅವರಿಗೆ ಗಂಗಾಧರಪ್ಪ ಹುಟ್ಟಿದ್ದು, ಶಾಂತಮ್ಮ 10 ವರ್ಷಗಳ ಹಿಂದೆಯೇ ಮೃತಪಟ್ಟಿದ್ದಾರೆ. ತನ್ನ ತಂದೆ ಹಾಗೂ ಮಲತಾಯಿಯನ್ನು ಕೊಂದು ಸ್ಥಳದಿಂದ ಪರಾರಿಯಾಗಿರುವ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಹುಬ್ಬಳ್ಳಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.