ರಾಜ್ಯ

ಬೀದರ್: ಮೇಲ್ಜಾತಿ ಯುವತಿಯ ಪ್ರೀತಿಸಿದ ದಲಿತ ಯುವಕನ ಮೇಲೆ ಅಮಾನುಷ ಹಲ್ಲೆ, ಸಾವು!

ಮೃತ ಯುವಕನನ್ನು ಕುಶನೂರು ಗ್ರಾಮದ ನಿವಾಸಿ ಸುಮಿತ್ ಕುಮಾರ್ (18) ಎಂದು ಗುರ್ತಿಸಲಾಗಿದೆ. ಯುವಕ ಕಮಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎಸ್ಸಿ ವಿದ್ಯಾರ್ಥಿಯಾಗಿದ್ದ.

ಬೀದರ್: ಮೇಲ್ಜಾತಿ ಯುವತಿಯ ಪ್ರೀತಿಸಿದ ದಲಿತ ಯುವಕನ ಮೇಲೆ ಅಮಾನುಷ ಹಲ್ಲೆ, ಸಾವು!
ಸಂಗ್ರಹ ಚಿತ್ರ
Published On :

ಬೀದರ್: ಮೇಲ್ವರ್ಗದ ಯುವತಿಯನ್ನು ಪ್ರೀತಿ­ಸಿದ ದಲಿತ ಯುವಕನಿಗೆ ಮನಬಂದಂತೆ ಥಳಿಸಿ ಹತ್ಯೆ ಮಾಡಿರುವ ಘಟನೆಯೊಂದು ಬೀದರ್ ನಲ್ಲಿ ಸೋಮವಾರ ವರದಿಯಾಗಿದೆ.

ಮೃತ ಯುವಕನನ್ನು ಕುಶನೂರು ಗ್ರಾಮದ ನಿವಾಸಿ ಸುಮಿತ್ ಕುಮಾರ್ (18) ಎಂದು ಗುರ್ತಿಸಲಾಗಿದೆ. ಯುವಕ ಕಮಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎಸ್ಸಿ ವಿದ್ಯಾರ್ಥಿಯಾಗಿದ್ದ. ಇದೇ ಗ್ರಾಮದ ಯುವತಿಯನ್ನು ಸುಮಿತ್ ಪ್ರೀತಿಸುತ್ತಿದ್ದ,

ಈ ವಿಚಾರ ತಿಳಿದ ಯುವತಿಯ ತಂದೆ ಹಾಗೂ ಸಹೋದರ ಜನವರಿ.5ರಂದು ಸುಮಿತ್ ಮೇಲೆ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಸುಮಿತ್ ನನ್ನು ಮಹಾರಾಷ್ಟ್ರದ ಲಾತೂರ್‌ನಲ್ಲಿರುವ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಾವನ್ನಪ್ಪಿದ್ದಾನೆ.

ಘಟನೆ ಸಂಬಂಧ ಕಿಶನ್ ಗಾವ್ಲಿ (55) ಮತ್ತು ರಾಹುಲ್ ಗಾವ್ಲಿ (24) ಎಂಬುವವರನ್ನು ಕುಶನೂರು ಪೊಲೀಸರು ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಬಂಧನಕ್ಕೊಳಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.