ಚಂಡಮಾರುತ, ವರ್ಷದ ಮೊದಲ ಮಳೆ: ಕರ್ನಾಟಕದಲ್ಲಿ 2 ದಿನ ವರ್ಷಧಾರೆ ಸಾಧ್ಯತೆ; ಎಲ್ಲೆಲ್ಲಿ? ಯಾವಾಗ?
ಆಗ್ನೇಯ ಮತ್ತು ಪಕ್ಕದ ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಚಂಡಮಾರುತದ ಪರಿಚಲನೆ ಈಗ ನೈಋತ್ಯ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯ ಮೇಲೆ ಇದ್ದು, ಸಮುದ್ರ ಮಟ್ಟದಿಂದ 3.1 ಕಿ.ಮೀ.ವರೆಗೆ ವಿಸ್ತರಿಸಿದೆ.

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಪರಿಚಲನೆ ಏರ್ಪಟ್ಟಿದ್ದು, ಕರ್ನಾಟಕದಲ್ಲಿ 2 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮುಂದಿನ ಹಾಲಿ ಹವಾಮಾನ ಪರಿಸ್ಥಿತಿ ಕುರಿತು ಮಾಹಿತಿ ನೀಡಿರುವ ಹವಾಮಾನ ಇಲಾಖೆ, ಆಗ್ನೇಯ ಮತ್ತು ಪಕ್ಕದ ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಚಂಡಮಾರುತದ ಪರಿಚಲನೆ ಈಗ ನೈಋತ್ಯ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯ ಮೇಲೆ ಇದ್ದು, ಸಮುದ್ರ ಮಟ್ಟದಿಂದ 3.1 ಕಿ.ಮೀ.ವರೆಗೆ ವಿಸ್ತರಿಸಿದೆ ಎಂದು ಹೇಳಿದೆ.
ಅಂತೆಯೇ ಜನವರಿ 13 ಮತ್ತು 14ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಪ್ರಮುಖವಾಗಿ ಜನವರಿ 13ರಂದು ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಹಗುರ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಉಳಿದಂತೆ ಕರಾವಳಿ ಕರ್ನಾಟಕ, ಉತ್ತರ ಒಳನಾಡು ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಹೆಚ್ಚು. ವಿಜಯಪುರ, ಬೀದರ್, ಕಲಬುರ್ಗಿ, ಬಾಗಲಕೋಟೆ, ಧಾರವಾಡ, ಬೆಳಗಾವಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದಲ್ಲಿ ಮಂಜು ಬೀಳುವ ಸಾಧ್ಯತೆ ಹೆಚ್ಚು ಎಂದು ಹೇಳಿದೆ.
ಅಂತೆಯೇ ಜನವರಿ 14ರಂದು ಮೈಸೂರು, ಮಂಡ್ಯ, ಕೊಡಗು, ಹಾಸನ ಮತ್ತು ತುಮಕೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಈ ಜಿಲ್ಲೆಗಳನ್ನು ಹೊರತು ಪಡಿಸಿದರೆ ಕರಾವಳಿ ಕರ್ನಾಟಕ, ಉತ್ತರ ಒಳನಾಡು ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ. ವಿಜಯಪುರ, ಬೀದರ್, ಕಲಬುರ್ಗಿ, ಬಾಗಲಕೋಟೆ, ಧಾರವಾಡ, ಬೆಳಗಾವಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದಲ್ಲಿ ಮಂಜು ಬೀಳುವ ಸಾಧ್ಯತೆ ಇದೆ ಎಂದು ಹೇಳಿದೆ.
ಜನವರಿ 15ರಿಂದ ಜನವರಿ 17ರವರೆಗೂ ರಾಜ್ಯಾದ್ಯಂತ ಒಣಹವೆ ಇರುವ ಸಾಧ್ಯತೆ ಇದ್ದು, ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ ಎಂದು ಹೇಳಿದೆ.
ಬೆಂಗಳೂರಿನಲ್ಲಿ ತಾಪಮಾನ ಕುಸಿತ
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ ಮುಂದುವರೆದಿದ್ದು, ಮುಂದಿನ 48 ಗಂಟೆಗಳ ಕಾಲ ರಾಜಧಾನಿಯಲ್ಲಿ ತಾಪಮಾನ 18°C ರಿಂದ 25°C ವರೆಗೂ ಇರಲಿದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



