ನಕ್ಸಲರ ಶರಣಾಗತಿ, ವಿಕ್ರಮ್ ಗೌಡ ಎನ್‌ಕೌಂಟರ್ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಅಣ್ಣಾಮಲೈ
"ಸಾಮಾನ್ಯವಾಗಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮುಖದಲ್ಲಿ ಶರಣಾಗುವುದು ಕ್ರಮ. ಆದರೆ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ನಕ್ಸಲರ ಶರಣಾಗತಿ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅಣ್ಣಾಮಲೈ ಹೇಳಿದರು.

ಉಡುಪಿ: ರಾಜ್ಯದಲ್ಲಿ ನಕ್ಸಲರ ಶರಣಾಗತಿ ಮತ್ತು ಪುನರ್ವಸತಿ ನೀತಿಯ ಬಗ್ಗೆ ಸಂಶಯ ವ್ಯಕ್ತಪಡಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು, ಅದರ ಪರಿಣಾಮಕಾರಿತ್ವ ಮತ್ತು ಪಾರದರ್ಶಕತೆಯನ್ನು ಶನಿವಾರ ಪ್ರಶ್ನಿಸಿದ್ದಾರೆ.
ಜನವರಿ 2015 ಮತ್ತು ಆಗಸ್ಟ್ 2016 ರ ನಡುವೆ ಉಡುಪಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಆಗಿ ಮತ್ತು ಕರ್ನಾಟಕದ ನಕ್ಸಲರ ಕೇಂದ್ರವೆಂದು ಪರಿಗಣಿಸಲಾದ ಚಿಕ್ಕಮಗಳೂರು ಎಸ್‌ಪಿಯಾಗಿ 2018 ರಲ್ಲಿ ಸೇವೆ ಸಲ್ಲಿಸಿದ್ದ ಅಣ್ಣಾಮಲೈ ಅವರು ಇಂದು ಉಡುಪಿಯಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದರು.
ರಾಜ್ಯದಲ್ಲಿ ನಕ್ಸಲರ ಶರಣಾಗತಿ ಮತ್ತು ಪುನರ್ವಸತಿ ನೀತಿ ಜಾರಿಯಲ್ಲಿದೆ. ನಕ್ಸಲರು ತಮ್ಮ ಚಟುವಟಿಕೆಗಳನ್ನು ತೊರೆದು ಮುಖ್ಯವಾಹಿನಿಗೆ ಬರಲು ದಾರಿ ಮಾಡಿಕೊಡುವುದು ಇದರ ಉದ್ದೇಶವಾಗಿದೆ. ಅದರೆ ಇಲ್ಲಿ ಸರ್ಕಾರವು ನಕ್ಸಲರಿಗೆ ಶರಣಾಗತಿ ಪ್ರಕ್ರಿಯೆಯನ್ನು ಸುಲಭ ಮಾಡಿಕೊಟ್ಟಂತೆ ಕಾಣುತ್ತಿದೆ ಎಂದರು.
ಶರಣಾಗತಿ ಮತ್ತು ಎನ್‌ಕೌಂಟರ್ ಪ್ರಕರಣಗಳು ವ್ಯಾಪಕ ಊಹಾಪೋಹಗಳಿಗೆ ಕಾರಣವಾಗಿವೆ. ಅನೇಕರು ಈ ಘಟನೆಗಳು ಯಾವ ಸಂದರ್ಭದಲ್ಲಿ ನಡೆದವು ಎಂದು ಪ್ರಶ್ನಿಸುತ್ತಿದ್ದಾರೆ ಎಂದರು.
"ಸಾಮಾನ್ಯವಾಗಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮುಖದಲ್ಲಿ ಶರಣಾಗುವುದು ಕ್ರಮ. ಆದರೆ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ನಕ್ಸಲರ ಶರಣಾಗತಿ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅಣ್ಣಾಮಲೈ ಹೇಳಿದರು.
ನಕ್ಸಲ್ ಮುಖಂಡ ವಿಕ್ರಮ್ ಗೌಡನ ಎನ್‌ಕೌಂಟರ್‌ನಲ್ಲೂ ಅನುಮಾನವಿದೆ. ಎನ್‌ಕೌಂಟರ್ ಆದ ತಕ್ಷಣ ನಕ್ಸಲರು ಶರಣಾದರು ಎಂದು ಸರ್ಕಾರ ಹೇಳುತ್ತಿದೆ. ಆದರೆ ನಕ್ಸಲರು ಶರಣಾಗುವಂತೆ ಯಾರು ಮಾತುಕತೆ ನಡೆಸಿದರು ಎಂಬುದು ಗೊತ್ತಿಲ್ಲ. ನಕ್ಸಲ್ ತಂಡದೊಳಗಡೆ ಇರುವ ಆಂತರಿಕ ರಾಜಕೀಯವನ್ನು ಕಾಂಗ್ರೆಸ್ ದುರ್ಬಳಕೆ ಮಾಡಿಕೊಳ್ಳುತ್ತಿದೆಯೇ? ಎಂಬ ಅನುಮಾನ ಮೂಡುತ್ತಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



