KPCL ನೇಮಕಾತಿ: ಕನ್ನಡ ಭಾಷೆ ಮರು ಪರೀಕ್ಷೆಗೆ ಹೈಕೋರ್ಟ್ ಆದೇಶ
ಅರ್ಹತಾ ಅಂಕಗಳಾಗಿ ಕನಿಷ್ಠ 50 ಅಂಕಗಳನ್ನು ಏಕಪಕ್ಷೀಯವಾಗಿ ನಿಗದಿಪಡಿಸಿರುವುದು ನ್ಯಾಯಯುತವಾಗಿಲ್ಲ ಅಥವಾ ಪಾರದರ್ಶಕ ಕ್ರಮವಲ್ಲ ಎಂದು ನ್ಯಾಯಾಲಯ ಹೇಳಿದೆ.

ಬೆಂಗಳೂರು: ಹೈದರಾಬಾದ್-ಕರ್ನಾಟಕ ಮತ್ತು ಇತರೆ ಕೋಟಾಗಳ ಅಡಿಯಲ್ಲಿ ಜೂನಿಯರ್ ಎಂಜಿನಿಯರ್ (ಮೆಕ್ಯಾನಿಕಲ್) ಮತ್ತು ಸಹಾಯಕ ಎಂಜಿನಿಯರ್(ಮೆಕ್ಯಾನಿಕಲ್) ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ 'ಕರ್ನಾಟಕ ವಿದ್ಯುತ್ ನಿಗಮ ನಿಯಮಿತ(ಕೆಪಿಸಿಎಲ್)ಕ್ಕೆ ಆದೇಶಿಸಿದೆ.
“ನೇಮಕಾತಿ ಅಧಿಸೂಚನೆಯು ಕನ್ನಡ ಭಾಷಾ ಪರೀಕ್ಷೆಗೆ ಗರಿಷ್ಠ 150 ಅಂಕಗಳನ್ನು ಸ್ಪಷ್ಟವಾಗಿ ಸೂಚಿಸಿದ್ದರೂ, ಈಗಾಗಲೇ ನಡೆಸಲಾದ ಪರೀಕ್ಷೆಯ ನಂತರ ಅರ್ಹತಾ ಅಂಕಗಳಾಗಿ ಕನಿಷ್ಠ 50 ಅಂಕಗಳನ್ನು ಏಕಪಕ್ಷೀಯವಾಗಿ ನಿಗದಿಪಡಿಸಿರುವುದು ನ್ಯಾಯಯುತವಾಗಿಲ್ಲ ಅಥವಾ ಪಾರದರ್ಶಕ ಕ್ರಮವಲ್ಲ” ಎಂದು ನ್ಯಾಯಾಲಯ ಹೇಳಿದೆ.
ಕನ್ನಡ ಭಾಷಾ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕಗಳಿಗೆ ಬದಲಾಗಿ 36 ಅಂಕಗಳನ್ನು ಗಳಿಸಿದ್ದಾರೆ ಎಂಬ ಕಾರಣಕ್ಕೆ ವಿಜಯಪುರ ಜಿಲ್ಲೆಯ ಗೀತಾ ಚವಾಣ್ ಅವರ ಆಯ್ಕೆಯನ್ನು ತಿರಸ್ಕರಿಸಲಾಗಿತ್ತು.
ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರು, ಪರೀಕ್ಷೆ ನಡೆಸಿದ ನಂತರ ನಿಗದಿಪಡಿಸಲಾದ ಕನಿಷ್ಠ 50 ಅಂಕಗಳ ಅರ್ಹತೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಸೇವಾ(ಕೇಡರ್, ನೇಮಕಾತಿ, ಪ್ರೊಬೇಷನ್, ಬಡ್ತಿ ಮತ್ತು ಹಿರಿತನ) ನಿಯಮಗಳು, 1988 ರ ನಿಯಮಗಳಿಗೆ ವಿರುದ್ಧವಾಗಿದೆ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



