ರಾಜ್ಯ

ಹಸುಗಳ ಕೆಚ್ಚಲು ಕೊಯ್ದ ನೀಚರ ಬಂಧಿಸದಿದ್ದರೆ ಸಚಿವ ಜಮೀರ್ ವಿರುದ್ಧ ಹೋರಾಟ: ಶ್ರೀರಾಮ ಸೇನೆ ಎಚ್ಚರಿಕೆ

ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಘಟನೆ ಗಮನಕ್ಕೆ ಬಂದಿದ್ದು. ಇದು ನೀಚ ಕೃತ. ರಾಜ್ಯದಲ್ಲಿ ಇಸ್ಲಾಮಿಕ್ ಶಕ್ತಿಯ ಪ್ರದರ್ಶನ ಆಗುತ್ತಿದೆ, ಇದು ರಾಕ್ಷಸ ಕೃತ್ಯಕ್ಕೆ ಉದಾಹರಣೆ ಎಂದು ಕಿಡಿಕಾರಿದ್ದಾರೆ.

ಹಸುಗಳ ಕೆಚ್ಚಲು ಕೊಯ್ದ ನೀಚರ ಬಂಧಿಸದಿದ್ದರೆ ಸಚಿವ ಜಮೀರ್ ವಿರುದ್ಧ ಹೋರಾಟ: ಶ್ರೀರಾಮ ಸೇನೆ ಎಚ್ಚರಿಕೆ
ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್
Published On :

ಧಾರವಾಡ: ಹಸುಗಳ ಕೆಚ್ಚಲು ಕೊಯ್ದ ನೀಚರ ಬಂಧಿಸದಿದ್ದರೆ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಘಟನೆ ಗಮನಕ್ಕೆ ಬಂದಿದ್ದು. ಇದು ನೀಚ ಕೃತ. ರಾಜ್ಯದಲ್ಲಿ ಇಸ್ಲಾಮಿಕ್ ಶಕ್ತಿಯ ಪ್ರದರ್ಶನ ಆಗುತ್ತಿದೆ, ಇದು ರಾಕ್ಷಸ ಕೃತ್ಯಕ್ಕೆ ಉದಾಹರಣೆ ಎಂದು ಕಿಡಿಕಾರಿದ್ದಾರೆ.

ಜಮೀರ್ ಅಹ್ಮದ್ ಅವರೇ, ಇದು ನಿಮ್ಮ ಕ್ಷೇತ್ರದಲ್ಲಿ ಆಗಿದೆ. ಇದನ್ನು ತಾವು ಗಂಭೀರವಾಗಿ ತೆಗೆದುಕೊಳ್ಳಬೇಕು. ಹಸು ಹಿಂದೂಗಳಿಗೆ ಅತ್ಯಂತ ಪೂಜ್ಯ ಪ್ರಾಣಿ. ಅದು ಬರೀ ಪ್ರಾಣಿ ಅಲ್ಲಾ, ಅದು ನಮಗೆ ಅನ್ನ ನೀಡುತ್ತದೆ, ಗೊಬ್ಬರ ಕೊಡುತ್ತದೆ, ಔಷಧಿ ಕೊಡುತ್ತದೆ ಹಾಗೂ ರೈತರ ಬೆನ್ನೆಲುಬು ಕೂಡ ಹೌದು. ಅದರ ಕೆಚ್ಚಲು ಕೊಯ್ದ ನೀಚರನ್ನು ಒದ್ದು ಒಳಗಡೆ ಹಾಕದಿದ್ದರೇ ಶ್ರೀರಾಮ ಸೇನೆಯಿಂದ ಜಮೀರ್ ವಿರುದ್ಧ ರಾಜ್ಯದಲ್ಲಿ ಹೋರಾಟ ಮಾಡುತ್ತೇವೆ, ಇದು ಎಚ್ಚರಿಕೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಇದೆ. ಕಾನೂನು ಇದ್ದರೂ ಕಾಂಗ್ರೆಸ್‌ನ ಮುಸ್ಲಿಂ ತುಷ್ಟೀಕರಣ ಹಿನ್ನೆಲೆಯಲ್ಲಿ ನಿರಂತರ ಗೋಹತ್ಯೆ ಆಗುತ್ತಿದೆ. ನಿರಂತರ ಕಸಾಯಿ ಖಾನೆಗೆ ಹಸು ಹೋಗುತ್ತಿವೆ. ಅದನ್ನು ತಡೆಯಬೇಕು. ಇಂದು ಸಂಭವಿಸಿರುವ ಘಟನೆ ನೋಡಲು ಆಗುತ್ತಿಲ್ಲ. ಅದು ನಮ್ಮ ತಾಯಿ. ಜಮೀರ್‌ಗೆ ಮಾನಾ ಮರ್ಯಾದೆ ಇದ್ದರೇ ರಾಕ್ಷಸಿ ಕೃತ್ಯ ಮಾಡಿದವರನ್ನು ಒದ್ದು ಒಳಗೆ ಹಾಕಿ. ಇಲ್ಲದಿದ್ದರೇ ಹೋರಾಟಕ್ಕೆ ಸಿದ್ದ ಎಂದು ಸವಾಲು ಹಾಕಿದ್ದಾರೆ.

ಹಸುವಿನ ಕೆಚ್ಚಲು ಕೊಯ್ದಿರುವುದನ್ನು ನೋಡಿದರೆ ಸುಮ್ಮನೆ ಇರಲು ಆಗಲ್ಲ. ಇದನ್ನು ಖಂಡಿಸುತ್ತೇನೆ. ನಿಮ್ಮ ಒಳಗೆ ಇರುವ ಬಾಂಗ್ಲಾದೇಶದವರ ಕುಕೃತ್ಯಕ್ಕೆ ಉತ್ತರ ನೀವೇ ಕೊಡಬೇಕು. ನೀವೇ ಒದ್ದು ಒಳಗೆ ಹಾಕಬೇಕು. ಆ ಕ್ಷೇತ್ರದ ಸಚಿವರು ನೀವು, ಅದು ನಿಮ್ಮ ಜವಾಬ್ದಾರಿ. ಹಿಂದೂ ಜನ ನಿಮಗೆ ವೋಟು ಹಾಕಿದ್ದಾರೆ. ಆ ಹಿಂದೂಗಳಿಗೆ ನ್ಯಾಯ ಒದಗಿಸಬೇಕಾದರೆ ಅವರನ್ನು ಬಂಧಿಸಿ. ನಮ್ಮ ತೇಜಸ್ವಿಗೌಡ ಬೆಳಗ್ಗೆಯಿಂದ ಅಲ್ಲೇ ಇದ್ದಾರೆ. ಪೊಲೀಸರು ಇದನ್ನು ತಡೆಯಬೇಕು ಎಂದು ಹರಿಹಾಯ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.