ಹಸುಗಳ ಕೆಚ್ಚಲು ಕೊಯ್ದ ಘಟನೆ: ಮಾಲೀಕರಿಗೆ ವೈಯಕ್ತಿಕ ಪರಿಹಾರ ಕೊಡುತ್ತೇನೆಂದ ಸಚಿವ ಜಮೀರ್
ನಾನು, ಮುಖ್ಯಮಂತ್ರಿಗಳು ಬಳ್ಳಾರಿಯಲ್ಲಿ ಇದ್ದೆವು. ವಿಚಾರ ತಿಳಿದ ತಕ್ಷಣ ಮುಖ್ಯಮಂತ್ರಿಗಳು ಕಮಿಷನರ್ಗೆ ಕರೆ ಮಾಡಿ ಹೇಳಿದ್ದಾರೆ. ಕೃತ್ಯ ಎಸಗಿದವರು ಯಾರೇ ಆಗಿರಲಿ, ಕೂಡಲೇ ಬಂಧಿಸುವಂತೆ ಹೇಳಿದ್ದಾರೆ ಎಂದು ಹೇಳಿದರು.

ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದ ಘಟನೆ ಚರ್ಚೆಗೆ ಗ್ರಾಸವಾಗಿರುವ ನಡುವಲ್ಲೇ ಹಸುಗಳ ಮಾಲೀಕರಿಗೆ ವೈಯಕ್ತಿಕವಾಗಿ ಪರಿಹಾರ ಕೊಡುತ್ತೇನೆಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು, ಮುಖ್ಯಮಂತ್ರಿಗಳು ಬಳ್ಳಾರಿಯಲ್ಲಿ ಇದ್ದೆವು. ವಿಚಾರ ತಿಳಿದ ತಕ್ಷಣ ಮುಖ್ಯಮಂತ್ರಿಗಳು ಕಮಿಷನರ್ಗೆ ಕರೆ ಮಾಡಿ ಹೇಳಿದ್ದಾರೆ. ಕೃತ್ಯ ಎಸಗಿದವರು ಯಾರೇ ಆಗಿರಲಿ, ಕೂಡಲೇ ಬಂಧಿಸುವಂತೆ ಹೇಳಿದ್ದಾರೆ ಎಂದು ಹೇಳಿದರು.
ಪ್ರಾಣಿಗಳ ಮೇಲೆ ಯಾಕೆ ದ್ವೇಷ, ಈ ರೀತಿ ಮಾಡಿದವನು ಮನುಷ್ಯನೇ ಅಲ್ಲ. ಏನೇ ದ್ವೇಷ, ಗಲಾಟೆ ಇದ್ದರೂ ಈ ರೀತಿ ಮಾಡಬಾರದು. ನಾನು ಕೂಡ ಪೊಲೀಸರಿಗೆ ಹೇಳಿದ್ದೇನೆ. ಯಾರೇ ಆದರೂ ಅವರ ಮೇಲೆ ಕಠಿಣ ಕ್ರಮ ಆಗಬೇಕು. ಮಾಲೀಕನಿಗೆ ವೈಯಕ್ತಿಕವಾಗಿ ಮೂರು ಹೊಸ ಹಸುಗಳನ್ನು ನಾನೇ ಕೊಡಿಸುತ್ತೇನೆ. ಅವರ ಕುಟುಂಬದ ಜೊತೆಗೆ ನಾನು ಇದೀನಿ ಎಂದು ತಿಳಿಸಿದರು. ಇದೇ ವೇಳೆ ಹಸು ಕೊಡಿಸೋ ಜವಾಬ್ದಾರಿ ನಿನ್ನದು ಎಂದು ವಿನಯ್ ಎಂಬಾತನಿಗೆ ಜಮೀರ್ ಅವರು ಸೂಚನೆ ನೀಡಿದರು.
ಆರೋಗ್ಯ ಸಚಿವ ಖಂಡನೆ
ಘಟನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮೂರು ಹಸುಗಳ ಕೆಚ್ಚಲು ಕತ್ತರಿಸಿದ ದುಷ್ಕರ್ಮಿಗಳ ಕೃತ್ಯ ಆಘಾತ ಹಾಗೂ ನೋವು ತರಿಸಿದೆ. ಮೂಕ ಜೀವಿಗಳ ಮೇಲೆ ನಡೆದಿರುವ ಈ ಕ್ರೌರ್ಯ ಖಂಡನೀಯ. ಮಾನವೀಯತೆ ಇರುವ ಯಾರೂ ಈ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ. ಇದೊಂದು ಮಾನವೀಯತೆ ಮೀರಿದ ಕ್ರೌರ್ಯದ ಪರಮಾವಧಿ ಎಂದು ಹೇಳಿದ್ದಾರೆ.
ಈ ಕೃತ್ಯವೆಸಗಿದ ಪಾಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು. ಪಾಪಿಗಳ ಇಂತಹ ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಈ ದುಷ್ಕೃತ್ಯವೆಸಗಿದ ಕಿರಾತಕರ ವಿರುದ್ಧ ಕಾನೂನಿನ ಚೌಕಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



