ವಿಜಯಪುರ: ಕರುಳ ಬಳ್ಳಿಯನ್ನೇ ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನ; 4 ಮಕ್ಕಳು ನೀರುಪಾಲು
ಮೃತ ಮಕ್ಕಳನ್ನು ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ 5 ವರ್ಷದ ತನು ನಿಂಗರಾಜ ಭಜಂತಿ, ಮೂವರು ವರ್ಷದ ರಕ್ಷಾ ನಿಂಗರಾಜ ಭಜಂತ್ರಿ ಹಾಗೂ 13 ತಿಂಗಳ ಮಕ್ಕಳಾದ ಹಸೇನ ನಿಂಗರಾಜ ಭಜಂತ್ರಿ ಹಾಗೂ ಹುಸೇನ ನಿಂಗರಾಜ ಭಜಂತ್ರಿ ಎಂದು ಗುರುತಿಸಲಾಗಿದೆ.

ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತ ತಾಯಿಯೊಬ್ಬಳು ಮಕ್ಕಳ ಸಮೇತ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು. ಘಟನೆಯಲ್ಲಿ ನಾಲ್ಕು ಮಕ್ಕಳು ಸಾವನ್ನಪ್ಪಿವೆ. ಇನ್ನು ಮಹಿಳೆಯನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಮೃತ ಮಕ್ಕಳನ್ನು ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ 5 ವರ್ಷದ ತನು ನಿಂಗರಾಜ ಭಜಂತಿ, ಮೂವರು ವರ್ಷದ ರಕ್ಷಾ ನಿಂಗರಾಜ ಭಜಂತ್ರಿ ಹಾಗೂ 13 ತಿಂಗಳ ಮಕ್ಕಳಾದ ಹಸೇನ ನಿಂಗರಾಜ ಭಜಂತ್ರಿ ಹಾಗೂ ಹುಸೇನ ನಿಂಗರಾಜ ಭಜಂತ್ರಿ ಎಂದು ಗುರುತಿಸಲಾಗಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಬಳಿಯ, ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ಘಟನೆ ನಡೆದಿದೆ. ಮಕ್ಕಳನ್ನು ಕಾಲುವೆಗೆ ಎಸೆದಿದ್ದನ್ನು ನೋಡಿದ ಸ್ಥಳೀಯರು ಮಕ್ಕಳ ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ಅಷ್ಟರಲ್ಲಾಗಲೇ ಮಕ್ಕಳು ನೀರುಪಾಲಾಗಿದ್ದವು. ಆದರೆ ತಾಯಿ ಭಾಗ್ಯ ಭಜಂತ್ರಿಯನ್ನು ರಕ್ಷಿಸಿದ್ದಾರೆ.
ಕೌಟುಂಬಿಕ ಕಲಹಕ್ಕೆ ಬೇಸತ್ತ ಭಾಗ್ಯ ಈ ಕೃತ್ಯ ಎಸಗಿದ್ದಾಳೆ ಎಂದು ಶಂಕಿಸಲಾಗಿದೆ. ಸದ್ಯ ಸ್ಥಳೀಯ ಮೀನುಗಾರರು ಇಬ್ಬರು ಹೆಣ್ಣು ಮಕ್ಕಳ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ನಿಡಗುಂದಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಗಂಡು ಮಕ್ಕಳ ಮೃತದೇಹಕ್ಕಾಗಿ ಹುಡುಕಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



