ರಾಜ್ಯ

ಲೋಕಾಯುಕ್ತ ದಾಳಿ ಬಳಿಕ ಇಬ್ಬರು ಬಿಬಿಎಂಪಿ ಅಧಿಕಾರಿಗಳ ಅಮಾನತು

ನಗರದ ಸೌತ್ ಎಂಡ್ ಸರ್ಕಲ್‌ನಲ್ಲಿರುವ ಸಹಾಯಕ ಕಂದಾಯ ಅಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದಾಗ ಅಮ್ಮನ ಬದಲಿಗೆ ಅವರ ಮಗ ನವೀನ್ ಕಚೇರಿ ಲಾಗಿನ್ ಐಡಿ ಪಡೆದು ಕೆಲಸ ಮಾಡುತ್ತಿರುವುದು ಪತ್ತೆಯಾಗಿತ್ತು.

ಲೋಕಾಯುಕ್ತ ದಾಳಿ ಬಳಿಕ ಇಬ್ಬರು ಬಿಬಿಎಂಪಿ ಅಧಿಕಾರಿಗಳ ಅಮಾನತು
ಬಿಬಿಎಂಪಿ ಕಚೇರಿ
Published On :

ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ನಿರ್ದೇಶನದ ಮೇರೆಗೆ ಪಾಲಿಕೆ ಆಡಳಿತ ಇಲಾಖೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಜನವರಿ 10ರಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಬಿಬಿಎಂಪಿಯ 54 ಕಚೇರಿಗಳ ಮೇಲೆ ದಾಳಿ ನಡೆಸಲಾಗಿತ್ತು.

ನಗರದ ಸೌತ್ ಎಂಡ್ ಸರ್ಕಲ್‌ನಲ್ಲಿರುವ ಸಹಾಯಕ ಕಂದಾಯ ಅಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದಾಗ ಅಮ್ಮನ ಬದಲಿಗೆ ಅವರ ಮಗ ನವೀನ್ ಕಚೇರಿ ಲಾಗಿನ್ ಐಡಿ ಪಡೆದು ಕೆಲಸ ಮಾಡುತ್ತಿರುವುದು ಪತ್ತೆಯಾಗಿತ್ತು.

ಈ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ಸಿದ್ದಾಪುರ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅಕ್ರಮವಾಗಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ನವೀನ್ ನನ್ನು ಬಂಧಿಸಿದ್ದಾರೆ.

ತನ್ನ ಬದಲಿಗೆ ತನ್ನ ಮಗನಿಂದ ಕಚೇರಿಯಲ್ಲಿ ಕೆಲಸ ಮಾಡಿಸುತ್ತಿದ್ದ ಸಹಾಯಕ ಕಂದಾಯ ಅಧಿಕಾರಿ ಸುಜಾತಾ ಹಾಗೂ ಎಸ್ ಡಿಎ ಕವಿತಾ ಅವರನ್ನು ಅಧಿಕಾರ ದುರುಪಯೋಗ ಪಡಿಸಿಕೊಂಡ ಆರೋಪದ ಮೇಲೆ ಸೇವೆಯಿಂದ ಅಮಾನತುಗೊಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.