ಕಲಬುರಗಿ: 'ಪ್ರೀತ್ಸೆ ಪ್ರೀತ್ಸೆ' ಅಂತಾ ಅಪ್ರಾಪ್ತೆ ಪ್ರಾಣಕ್ಕೆ ಎರವಾದ ಮುಸ್ಲಿಂ ಯುವಕನ ಬಂಧನ
ಇನ್ನೂ ಬಾಲಕಿ ಸಾವಿಗೆ ನ್ಯಾಯ ಸಿಗಬೇಕು ಎಂದು ಘಟನೆಯನ್ನು ಖಂಡಿಸಿ ಜೇವರ್ಗಿ ಪಟ್ಟಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದಿಂದ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದರು.

ಕಲಬುರಗಿ: ಪ್ರೀತಿಸುವಂತೆ ಪೀಡಿಸುತ್ತಿದ್ದ ಮುಸ್ಲಿಂ ಯುವಕನ ಕಿರುಕುಳ ತಾಳಲಾರದೇ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಜೇವರ್ಗಿ ತಾಲೂಕಿನಲ್ಲಿ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 14 ವರ್ಷದ ಬಾಲಕಿಗೆ ಕಳೆದ ಹಲವು ದಿನಗಳಿಂದ ಆಟೋ ಚಾಲಕ ಮೆಹಬೂಬ್ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ, ಆತನ ಕಿರುಕುಳ ತಾಳಲಾರದೇ ನೇಣುಬಿಗಿದುಕೊಂಡು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇನ್ನೂ ಬಾಲಕಿ ಸಾವಿಗೆ ನ್ಯಾಯ ಸಿಗಬೇಕು ಎಂದು ಘಟನೆಯನ್ನು ಖಂಡಿಸಿ ಜೇವರ್ಗಿ ಪಟ್ಟಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದಿಂದ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದರು.
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಬಾಲಕಿಯ ಆತ್ಮಹತ್ಯೆಗೆ ಕಾರಣವಾಗಿರುವ ಆರೋಪಿ ಮಹೆಬೂಬ್‌ನನ್ನು ಶೀಘ್ರ ಬಂಧಿಸಬೇಕು. ಪೊಕ್ಸೊ ಕಾಯ್ದೆಯಡಿ ಕಠಿಣ ಶಿಕ್ಷೆಗೆ ಗುರಿಪಡಿಸಲು ಕಾನೂನು ಕ್ರಮ ಜರುಗಿಸಬೇಕು. ಬಾಲಕಿಯ ಕುಟುಂಬಸ್ಥರಿಗೆ ಅಧಿಕ ಮೊತ್ತದ ಪರಿಹಾರ ಧನ ನೀಡಬೇಕು. ಆರೋಪಿಯನ್ನು ಬಂಧಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ ಎಂದು ಪ್ರತಿಭಟನೆಕಾರರು ಆಕ್ರೋಶ ವ್ಯಕ್ತಪಡಿಸಿದರು. ಹಲವು ದಿನಗಳಿಂದ ಪ್ರೀತಿ ಮಾಡುವಂತೆ ಯುವತಿಗೆ ಕಿರುಕುಳ ನೀಡಿದ ಆರೋಪಿ ಮೆಹಬೂಬ್, ನನ್ನು ಪೋಲಿಸರು ಇದೀಗ ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



