ರಾಜ್ಯ

ಬೆಂಗಳೂರಿನಲ್ಲಿ ಹೇಯ ಕೃತ್ಯ: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ; ಆರೋಪಿ ಬಂಧನ

ಸೋಮವಾರ ರಾತ್ರಿ 7.30ರ ಸುಮಾರಿಗೆ ಸುಮಾರಿಗೆ ಘಟನೆ ನಡೆದಿದೆ. ಸೋಮವಾರ ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದರು.

ಬೆಂಗಳೂರಿನಲ್ಲಿ ಹೇಯ ಕೃತ್ಯ: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ; ಆರೋಪಿ ಬಂಧನ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಪೈಶಾಚಿಕ ಕೃತ್ಯ ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ರಾತ್ರಿ 7.30ರ ಸುಮಾರಿಗೆ ಸುಮಾರಿಗೆ ಘಟನೆ ನಡೆದಿದೆ. ಸೋಮವಾರ ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದರು.

ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಯಾರು ಇರಲಿಲ್ಲ. ಈ ವೇಳೆ ಮನೆಗೆ ಬಂದ ಅಭಿಷೇಕ್​ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದಿದ್ದಾನೆ. ಬಳಿಕ, ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ.

ಅತ್ಯಾಚಾರವೆಸಗುವ ವೇಳೆ ಬಾಲಕಿ ನರಳಿ ನರಳಿ ಪ್ರಾಣ ಬಿಟ್ಟಿದ್ದಾಳೆ. ಸದ್ಯ, ರಾಮಮೂರ್ತಿ ನಗರ ಠಾಣೆ ಪೊಲೀಸರು ಆರೋಪಿ ಅಭಿಷೇಕನನ್ನು ಬಂಧಿಸಿದ್ದಾರೆ. ಇನ್ನು, ಅಭಿಷೇಕ್​ ಕುಮಾರ್​ ಕೂಡ ಗಾರೆ ಕೆಲಸ ಮಾಡಿಕೊಂಡಿದ್ದನು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.