ರಾಜ್ಯ

ಕಾಂಗ್ರೆಸ್ ಸರ್ಕಾರವೇ ಇರುತ್ತೆ ಅಂತಾ ಅನ್ಕೊಂಡಿದ್ದೀರಾ? ನನ್ ಕೈಗೆ ಸಿಗದೆ ಎಲ್ಗೋಗ್ತೀರಾ: ಅಧಿಕಾರಿಗಳಿಗೆ ಎಚ್.ಡಿ ರೇವಣ್ಣ ವಾರ್ನಿಂಗ್

ಈ ದೇಶದ ರಾಜಕೀಯ ನೋಡಿದ್ದೇನೆ. ನಾನು, ಸೋತಿದ್ದೇನೆ, ಗೆದ್ದಿದ್ದೇನೆ. ಕೇಸ್ ಹಾಕಿದರೆ ಹೆದರುತ್ತೇನೆ ಎಂದುಕೊಂಡಿದ್ದಾರೆ. ಇಂತಹ ಬಹಳ ಜನರನ್ನ ನೋಡಿದ್ದೇನೆ. ಇವರು ಮಾಡಿರುವ ಅಕ್ರಮವನ್ನು ಧಾರಾವಾಹಿ ತರ ಬಿಡುಗಡೆ ಮಾಡ್ತಿನಿ ಎಂದು ಗುಡುಗಿದ್ದಾರೆ.

ಕಾಂಗ್ರೆಸ್ ಸರ್ಕಾರವೇ ಇರುತ್ತೆ ಅಂತಾ ಅನ್ಕೊಂಡಿದ್ದೀರಾ? ನನ್ ಕೈಗೆ ಸಿಗದೆ ಎಲ್ಗೋಗ್ತೀರಾ: ಅಧಿಕಾರಿಗಳಿಗೆ ಎಚ್.ಡಿ ರೇವಣ್ಣ ವಾರ್ನಿಂಗ್
ಎಚ್.ಡಿ ರೇವಣ್ಣ
Published On :

ಹಾಸನ: ಅಧಿಕಾರಿಗಳೆಲ್ಲ ಕಾಂಗ್ರೆಸ್ ಸರ್ಕಾರವೇ ಆಡಳಿತದಲ್ಲಿ ಇರುತ್ತೆ ಎಂದುಕೊಂಡಿದ್ದಾರೆ. ಸಮಯ ಬರುತ್ತೆ, ನಾನು ಇವರನ್ನ ಬಿಡ್ತಿನಾ, ನನ್ನ ಕೈಗೆ ಸಿಗದೇ ಎಲ್ಲಿಗೆ ಹೋಗ್ತಾರೆ? ಎಂದು ಡಿಸಿ, ಎಸ್‍ಪಿ, ಜಿ.ಪಂ. ಸಿಇಓ, ಎಸಿಗಳಿಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಎಚ್ಚರಿಕೆ ನೀಡಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಜಿಲ್ಲಾಧಿಕಾರಿ, ಎಸ್‍ಪಿಗೆ ಬಡ್ತಿ ನೀಡಿದ್ದಾರೆ. ಇವರೆಲ್ಲ ಕಾಂಗ್ರೆಸ್ ಸರ್ಕಾರವೇ ಇರುತ್ತೆ ಎಂದುಕೊಂಡಿದ್ದಾರೆ. ನಾನು ಹೆದರಿ ಓಡಿ ಹೋಗುತ್ತೇನೆ, ದೇವೇಗೌಡರ ಕುಟುಂಬದ್ದು ಮುಗಿದೇ ಹೋಯಿತು ಎಂದುಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಈ ದೇಶದ ರಾಜಕೀಯ ನೋಡಿದ್ದೇನೆ. ನಾನು, ಸೋತಿದ್ದೇನೆ, ಗೆದ್ದಿದ್ದೇನೆ. ಕೇಸ್ ಹಾಕಿದರೆ ಹೆದರುತ್ತೇನೆ ಎಂದುಕೊಂಡಿದ್ದಾರೆ. ಇಂತಹ ಬಹಳ ಜನರನ್ನ ನೋಡಿದ್ದೇನೆ. ಇವರು ಮಾಡಿರುವ ಅಕ್ರಮವನ್ನು ಧಾರಾವಾಹಿ ತರ ಬಿಡುಗಡೆ ಮಾಡ್ತಿನಿ ಎಂದು ಗುಡುಗಿದ್ದಾರೆ.

ದೇವೇಗೌಡರು 94 ನೇ ವಯಸ್ಸಿನಲ್ಲಿ ರಾಜ್ಯಸಭೆಗೆ ಒಂದು ದಿನ ತಪ್ಪಿಸಿಕೊಳ್ಳದೆ ಹಾಜರಾಗಿ ರಾಜ್ಯದ ಪರ ಧ್ವನಿ ಎತ್ತುತ್ತಿದ್ದಾರೆ. ಅವರು, ಈ ಜಿಲ್ಲೆಯ ಜನರನ್ನು ಎಂದು ಮರೆಯಲ್ಲ. ಈ ಜಿಲ್ಲೆಗೆ ಏನು ಮಾಡಬೇಕು ಮಾಡುತ್ತೇವೆ ಎಂದು ಭರವಸೆ ಕೊಟ್ಟಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.