ರಾಜ್ಯ

BMTC ಪ್ರಯಾಣಿಕರಿಗೆ ಸೂಚನೆ: 15 ದಿನ ಈ ಸೇವೆ ಇರಲ್ಲ!

ಈ ಸಮಯದಲ್ಲಿ ಬಸ್‌ಗಳ ಮಾಹಿತಿ, ಯೋಜನೆ, ದರಪಟ್ಟಿ ಸೇರಿದಂತೆ ಯಾವುದೇ ಸೇವೆಗಳು ಕಾರ್ಯ ನಿರ್ವಹಣೆ ಮಾಡುವುದಿಲ್ಲ.

BMTC ಪ್ರಯಾಣಿಕರಿಗೆ ಸೂಚನೆ: 15 ದಿನ ಈ ಸೇವೆ ಇರಲ್ಲ!
ಬಿಎಂಟಿಸಿ ಬಸ್ (ಸಾಂದರ್ಭಿಕ ಚಿತ್ರ)
Published On :

ಬೆಂಗಳೂರು: ಬೆಂಗಳೂರಿನ ಪ್ರಮುಖ ಸಂಚಾರ ಜೀವನಾಡಿಯಾಗಿರುವ ಬಿಎಂಟಿಸಿ ಪ್ರಯಾಣಿಕರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ.

ಜನವರಿ 15 ರಿಂದ 30ರ ತನಕ 'ನಮ್ಮ ಬಿಎಂಟಿಸಿ' ಮೊಬೈಲ್ ಅಪ್ಲಿಕೇಶನ್ ಕಾರ್ಯ ನಿರ್ವಹಣೆ ಮಾಡುವುದಿಲ್ಲ. ಈ ಸಮಯದಲ್ಲಿ ಅಪ್ಲಿಕೇಶನ್‌ನಲ್ಲಿ ಯಾವ ಮಾಹಿತಿಯೂ ಸಿಗುವುದಿಲ್ಲ. ಪ್ರಯಾಣಿಕರು ಸಂಸ್ಥೆಯ ಜೊತೆ ಸಹಕರಿಸಬೇಕು ಎಂದು ಮನವಿ ಮಾಡಿಕೊಂಡಿದೆ.

ಬಿಎಂಟಿಸಿ ಪ್ರಯಾಣಿಕರು ತಮ್ಮ ಪ್ರಯಾಣವನ್ನು ಯೋಜಿಸಲು, ಬಸ್‌ಗಳ ಅಂದಾಜು ಆಗಮನ ಮತ್ತು ನಿರ್ಗಮನ ಸಮಯವನ್ನು ಪಡೆಯಲು ಮತ್ತು ಬಸ್ ವೇಳಾಪಟ್ಟಿಯ ಬಗ್ಗೆ ಮಾಹಿತಿ ಪಡೆಯಲು 'ನಮ್ಮ ಬಿಎಂಟಿಸಿ' ಮೊಬೈಲ್ ಅಪ್ಲಿಕೇಶನ್ ಬಳಕೆ ಮಾಡುತ್ತಿದ್ದರು. ನಗರಕ್ಕೆ ಹೊಸದಾಗಿ ಬರುವ ಜನರಿಗೆ ಈ ಅಪ್ಲಿಕೇಶನ್ ಸಹಾಯಕವಾಗಿದೆ. ಆದರೆ ದತ್ತಾಂಶ ನಿರ್ವಹಣೆ ಕಾರಣಕ್ಕೆ ಜನವರಿ 15 ರಿಂದ 30ರ ತನಕ 'ನಮ್ಮ ಬಿಎಂಟಿಸಿ' ಮೊಬೈಲ್ ಅಪ್ಲಿಕೇಶನ್ ಕಾರ್ಯ ನಿರ್ವಹಣೆ ಮಾಡುವುದಿಲ್ಲ ಎಂದು ತಿಳಿಸಲಾಗಿದೆ.

ಈ ಸಮಯದಲ್ಲಿ ಬಸ್‌ಗಳ ಮಾಹಿತಿ, ಯೋಜನೆ, ದರಪಟ್ಟಿ ಸೇರಿದಂತೆ ಯಾವುದೇ ಸೇವೆಗಳು ಕಾರ್ಯ ನಿರ್ವಹಣೆ ಮಾಡುವುದಿಲ್ಲ. ಈ ಅವಧಿಯಲ್ಲಿ ಉಂಟಾದ ಯಾವುದೇ ಅನಾನುಕೂಲತೆಗಾಗಿ ಬಿಎಂಟಿಸಿ ವಿಷಾದಿಸುತ್ತದೆ, ದತ್ತಾಂಶಗಳ ನಿರ್ವಹಣೆ ಪೂರ್ಣಗೊಂಡ ಬಳಿಕ ಅಪ್ಲಿಕೇಶನ್ ಎಂದಿನಂತೆ ಕಾರ್ಯ ನಿರ್ವಹಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.