Maha Kumbh Mela: ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಐ.ಆರ್ ಪೆರುಮಾಳ್ ಸನ್ಯಾಸಿಯಾಗಿ ಪ್ರತ್ಯಕ್ಷ, ಫೋಟೋ ವೈರಲ್!
ಐ.ಆರ್ ಪೆರುಮಾಳ್ ಅವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.

ರಾಯಚೂರು: ಅತ್ಯುನ್ನತ ವ್ಯಾಸಂಗ, ಐಎಎಸ್-ಐಪಿಎಸ್ ಗಳೇ ಭವಬಂಧನಗಳನ್ನು ತೊರೆದು ಸನ್ಯಾಸಿಗಳಾಗುತ್ತಿದ್ದರೆ. ಅದೇ ರೀತಿ ರಾಯಚೂರಿನ ಜಿಲ್ಲಾಧಿಕಾರಿಯಾಗಿದ್ದ ಐಆರ್ ಪೆರಮಾಳ್ ಅವರು ಮಹಾಕುಂಭ ಮೇಳದಲ್ಲಿ ಪ್ರತ್ಯಕ್ಷರಾಗಿದ್ದು ಅವರ ಫೋಟೋ ವೈರಲ್ ಆಗಿದೆ.
ಹೌದು... 1993-94ರಲ್ಲಿ ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಐ.ಆರ್ ಪೆರುಮಾಳ್ ಅವರು ಈಗ ಸನ್ಯಾಸಿಯಾಗಿ ಮಹಾಕುಂಭಮೇಳದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದ್ದು ಅವರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಜೀವನದ ಪಾರಮಾರ್ಥ ಅರಿತು ಸನ್ಯಾಸ ಸ್ವೀಕರಿಸಿದ್ದಾರೆ ಎಂಬ ವಿಶ್ಲೇಷಣೆ ಮಾಡಲಾಗುತ್ತಿದೆ.
ಐ.ಆರ್ ಪೆರುಮಾಳ್ ಅವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು. ಇನ್ನು ರಾಜ್ಯದ ನಾನಾ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವರು 2012ರಲ್ಲಿ ನಿವೃತ್ತರಾಗಿದ್ದು 2014ರಲ್ಲಿ ತಮಿಳುನಾಡಿನ ಮಧುರೈ ಜಿಲ್ಲೆಯ ಇರಂಜುಮುಡಿ ಶಿವನ ದೇವಾಲಯ ಬಳಿ ಮಠ ಕಟ್ಟಿಕೊಂಡಿದ್ದರು. ನಂತರಸನ್ಯಾಸತ್ವ ಸ್ವೀಕರಿಸಿ ಶಿವಯೋಗಿ ಪೆರುಮಾಳ್ ಸ್ವಾಮೀಜಿ ಆಗಿದ್ದು ಇದೀಗ ಮಹಾ ಕುಂಭಮೇಳದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



