ಚಾಮರಾಜಪೇಟೆ ಠಾಣೆಗೆ ಮುತ್ತಿಗೆ ಹಾಕಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: 40 ಮಂದಿ ವಿರುದ್ಧ FIR ದಾಖಲು
ಎಫ್ಐಆರ್ನಲ್ಲಿ ಟಿಪ್ಪುನಗರ ಮಸೀದಿ ಸಮಿತಿ ಅಧ್ಯಕ್ಷ ಮೆಹಬೂಬ್ ಖಾನ್, ಶಬ್ಬೀರ್, ಮಸೂದ್, ಸಿದ್ದಿಕ್ ಮತ್ತು ಇತರೆ 40 ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

ಬೆಂಗಳೂರು: ಠಾಣೆಗೆ ಮುತ್ತಿಗೆ ಹಾಕಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಮಹಿಳೆಯರು ಸೇರಿದಂತೆ 40ಕ್ಕೂ ಹೆಚ್ಚು ಮಂದಿ ವಿರುದ್ಧ ಚಾಮರಾಜಪೇಟೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಎಫ್ಐಆರ್ನಲ್ಲಿ ಟಿಪ್ಪುನಗರ ಮಸೀದಿ ಸಮಿತಿ ಅಧ್ಯಕ್ಷ ಮೆಹಬೂಬ್ ಖಾನ್, ಶಬ್ಬೀರ್, ಮಸೂದ್, ಸಿದ್ದಿಕ್ ಮತ್ತು ಇತರೆ 40 ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿದೆ.
ಜನವರಿ 14 ರಂದು ಐದು ಯುವಕರ ಗುಂಪೊಂದು 21 ವರ್ಷದ ಆಟೋರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿ, ವಾಹನವನ್ನು ಹಾನಿಗೊಳಿಸಿತ್ತು. ಈ ಸಂಬಂಧ ನಯಮತ್ ಪಾಷಾ ಎಂಬುವವರು ದೂರು ದಾಖಲಿಸಿದ್ದರು. ಈ ಸಂಬಂಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಕುರಿತು ಸಬ್ ಇನ್ಸ್ಪೆಕ್ಟರ್ ತನಿಖೆ ನಡೆಸಿ, ಪಾಷಾ ಅವರನ್ನು ಟಿಪ್ಪುನಗರದ ಮಸೀದಿ ಬಳಿ ಕರೆದೊಯ್ದು ಪರಿಶೀಲನೆ ನಡೆಸಿದ್ದರು.
ಈ ವಿಚಾರ ತಿಳಿದ ಆರೋಪಿಗಳಾದ ಚಂದನ್, ಸಲೀಂ, ಮಸೂದ್, ಶಬ್ಬೀರ್ ಮಹಿಳೆಯರು ಸೇರಿದಂತೆ 40 ಮಂದಿಯನ್ನು ಠಾಣೆ ಮುಂದೆ ಜಮಾಯಿಸುವಂತೆ ಮಾಡಿ, ಪ್ರತಿಭಟೆ ನಡೆಸಿದರು.
ನಯಾಮತ್ ಅವರನ್ನು ಏಕೆ ಬಂಧಿಸಿಲ್ಲ? ಏಕೆ ಬಿಟ್ಟು ಕಳುಹಿಸಿದ್ದೀರಾ’ ಎಂದು ಗಲಾಟೆ ಮಾಡಿದರು. ಪೊಲೀಸರಿಗೆ ಏರುದನಿಯಲ್ಲಿ ಪ್ರಶ್ನಿಸಿದರು. ಎಷ್ಟೇ ಸಮಾಧಾನ ಮಾಡಿದರೂ ಕೇಳದೇ, ಪೊಲೀಸ್ ಸಿಬ್ಬಂದಿಗಳನ್ನು ತಳ್ಳಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


