ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಜಿಟಿಮಳೆ: ಹಲವು ಜಿಲ್ಲೆಗಳಲ್ಲಿ ವರುಣನ ಆಗಮನ ಸೂಚನೆ
ಇಂದು ಭಾನುವಾರ, ರಜಾ ದಿನವೆಂದು ಹೊರಗೆ ಹೋಗಲು ಯೋಜನೆ ಹಾಕಿಕೊಂಡವರು ಮಳೆ ಕಂಡು ಶಪಿಸುತ್ತಿದ್ದಾರೆ. ಜನವರಿ ತಿಂಗಳ ಚಳಿಗಾಲದಲ್ಲಿ ಮಳೆ ಬರುತ್ತಿರುವುದು ಕಂಡು ಜನ ಕಂಗಾಲಾಗಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಭಾನುವಾರ ಬೆಳ್ಳಂಬೆಳಗ್ಗೆ ಚಳಿ ಮಧ್ಯೆ ವರುಣನ ದರ್ಶನವಾಗಿದೆ. ಬೆಳಗ್ಗೆಯಿಂದಲೇ ಜಿಟಿಜಿಟಿ ಮಳೆ ಸುರಿಯುತ್ತಿದ್ದು ಈಗ ದಟ್ಟ ಮೋಡ ಕವಿದ ವಾತಾವರಣವಿದೆ. ಇನ್ನು ಕೆಲ ದಿನಗಳವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಭಾನುವಾರ, ರಜಾ ದಿನವೆಂದು ಹೊರಗೆ ಹೋಗಲು ಯೋಜನೆ ಹಾಕಿಕೊಂಡವರು ಮಳೆ ಕಂಡು ಶಪಿಸುತ್ತಿದ್ದಾರೆ. ಜನವರಿ ತಿಂಗಳ ಚಳಿಗಾಲದಲ್ಲಿ ಮಳೆ ಬರುತ್ತಿರುವುದು ಕಂಡು ಜನ ಕಂಗಾಲಾಗಿದ್ದಾರೆ. ಬೆಂಗಳೂರಿನ ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ, ಮೆಜೆಸ್ಟಿಕ್, ವಿಧಾನಸೌಧ, ಜೆಪಿನಗರ, ರಿಚ್ಮಂಡ್ ವೃತ್ತ, ಟೌನ್ಹಾಲ್ ಸೇರಿದಂತೆ ಬಹುತೇಕ ಕಡೆ ಮಳೆಯಾಗಿದೆ.
ಅದೇ ರೀತಿ ರಾಜ್ಯದ ಕರಾವಳಿ ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರಗಳಲ್ಲಿ ಕೂಡ ಇನ್ನೊಂದು ವಾರದವರೆಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ತುಮಕೂರು, ವಿಜಯನಗರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಮಳೆ ಹಾಗೂ ಮೋಡಕವಿದ ವಾತಾವರಣದ ಕಾರಣ ರಾಜ್ಯಾದ್ಯಂತ ಚಳಿಯ ಪ್ರಮಾಣ ಕಡಿಮೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



