ಈಡೇರದ ಭರವಸೆ: ಸಿದ್ದರಾಮಯ್ಯ ತವರು ಕ್ಷೇತ್ರದ ಗ್ರಾಮಸ್ಥರಿಂದ ಕಾಂಗ್ರೆಸ್ ಮುಖಂಡರಿಗೆ ಬಹಿಷ್ಕಾರ
ಇದೀಗ ವರುಣಾದ ನಗರ್ಲೆ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರಿಗೆ ನಿಷೇಧ ಹೇರಲಾಗಿದೆ ಎಂಬ ಫ್ಲೆಕ್ಸ್‌ಗಳು ಅಲ್ಲಲ್ಲಿ ಕಾಣಿಸಿಕೊಂಡಿದೆ.

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಧಾನಸಭೆ ಕ್ಷೇತ್ರವಾದ ವರುಣಾದಲ್ಲೇ ಜನರು ಕಾಂಗ್ರೆಸ್ ನಾಯಕರಿಗೆ ಬಹಿಷ್ಕಾರ ಹಾಕಿದ ಬೆಳವಣಿಗೆಯೊಂದು ಮಂಗಳವಾರ ನಡೆದಿದೆ.
ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಸ್ಥಾಪನೆ ಸೇರಿದಂತೆ ಚುನಾವಣೆಗೂ ಮುನ್ನ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೀಡಿದ ಭರವಸೆಗಳನ್ನು ಈಡೇರಿಸದ ಕಾರಣ, ಬೇಸತ್ತ ಗ್ರಾಮಸ್ಥರು ಕಾಂಗ್ರೆಸ್ ನಾಯಕರಿಗೆ ಬಹಿಷ್ಕಾರ ಹಾಕಿದ್ದಾರೆ.
ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸಿ ಪ್ರತಿಷ್ಠಾನಕ್ಕೆ 3 ಲಕ್ಷ ಮೀಸಲಿಟ್ಟಿದ್ದರು. ಬಳಿಕ ಸಮುದಾಯದ ಮುಖಂಡರು ರೂ.20 ಲಕ್ಷ ಮೀಸಲಿಡುವಂತೆ ಮನವಿ ಮಾಡಿದ್ದರು. ಆದರೆ, ಸರ್ಕಾರ 3 ಲಕ್ಷ ನೀಡುವುದಾಗಿ ತಿಳಿಸಿದ್ದು, ಇದೇ ಅಸಮಾಧಾನಕ್ಕ ಕಾರಣವಾಗಿದೆ ಎಂದು ಹೇಳಲಾಗತ್ತಿದೆ.
ಇದೀಗ ವರುಣಾದ ನಗರ್ಲೆ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರಿಗೆ ನಿಷೇಧ ಹೇರಲಾಗಿದೆ ಎಂಬ ಫ್ಲೆಕ್ಸ್‌ಗಳು ಅಲ್ಲಲ್ಲಿ ಕಾಣಿಸಿಕೊಂಡಿದೆ. ಕಾಂಗ್ರೆಸ್ ಮುಖಂಡರಿಗೆ ನಮ್ಮ ಗ್ರಾಮದ ಒಳಗೆ ಪ್ರವೇಶವಿಲ್ಲ ಎಂದು ಬ್ಯಾನರ್‌ಗಳಲ್ಲಿ ಬರೆಯಲಾಗಿದೆ.
ನಗರ್ಲೆ ಗ್ರಾಮದ ಕಾಂಗ್ರೆಸ್ ಮುಖಂಡರು ಕೈಲಾಗದವರು (ನಾಮರ್ದರು), ಆದ ಕಾರಣ ಯಾವುದೇ ಕಾಂಗ್ರೆಸ್ ಮುಖಂಡರನ್ನು ಗ್ರಾಮಕ್ಕೆ ನಿಷೇಧಿಸಲಾಗಿದೆ ಎಂದು ಫ್ಲೆಕ್ಸ್ ಹಾಕಲಾಗಿದೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ, ಇದೀಗ ಬ್ಯಾನರ್ ಗಳನ್ನು ತೆರವುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



