ರಾಯಚೂರಿನಲ್ಲಿ ಮತ್ತೊಂದು ಭೀಕರ ಅಪಘಾತ: ಓರ್ವ ಮಹಿಳೆ ಸಾವು, 18 ಮಂದಿಗೆ ಗಾಯ
ಕೆಎಸ್ಆರ್ಟಿಸಿ ಬಸ್ ಅಂಕಲಿಮಠದಿಂದ ಮುದ್ಗಲ್ ಕಡೆ ಹೊರಟಿತ್ತು. ಮತ್ತೊಂದೆಡೆ ಟ್ರ್ಯಾಕ್ಟರ್ ಬನ್ನಿಗೋಳದಿಂದ ಕೂಲಿ ಕಾರ್ಮಿಕರನ್ನ ಕರೆದೊಯ್ಯುತ್ತಿತ್ತು.

ರಾಯಚೂರು: ರಾಯಚೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿ 18 ಮಂದಿಗೆ ಗಾಯವಾಗಿರುವ ಘಟನೆ ರಾಯಚೂರಿನ ಬನ್ನಿಗೋಳ ಹೊರವಲಯದಲ್ಲಿ ಗುರುವಾರ ನಡೆದಿದೆ.
ನಿನ್ನೆಯಷ್ಟೇ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಸಂಭವಿಸಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಅಪಘಾತ ಸಂಭವಿಸಿದೆ.
ಕೆಎಸ್ಆರ್ಟಿಸಿ ಬಸ್ ಮತ್ತು ಟ್ರ್ಯಾಕ್ಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಲಿಂಗಸಗೂರು ತಾಲೂಕಿನ ಬನ್ನಿಗೋಳ ಗ್ರಾಮದ ನಿವಾಸಿ ಶ್ರೀದೇವಿ (19) ಎಂಬ ಮಹಿಳೆ ಮೃತಪಟ್ಟಿದ್ದಾರೆ.
ಕೆಎಸ್ಆರ್ಟಿಸಿ ಬಸ್ ಅಂಕಲಿಮಠದಿಂದ ಮುದ್ಗಲ್ ಕಡೆ ಹೊರಟಿತ್ತು. ಮತ್ತೊಂದೆಡೆ ಟ್ರ್ಯಾಕ್ಟರ್ ಬನ್ನಿಗೋಳದಿಂದ ಕೂಲಿ ಕಾರ್ಮಿಕರನ್ನ ಕರೆದೊಯ್ಯುತ್ತಿತ್ತು. ಈ ವೇಳೆ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಗೆ ಡಿಕ್ಕಿ ಹೊಡೆದಿದೆ. ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ಲಿಂಗಸಗೂರು & ಮುದ್ಗಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಮುದ್ಗಲ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



