MUDA ಹಗರಣದಲ್ಲಿ CM ಸಿದ್ದರಾಮಯ್ಯಗೆ ಲೋಕಾಯುಕ್ತ ಕ್ಲೀನ್‌ಚಿಟ್? ಸೋಮವಾರ ಕೋರ್ಟ್ ಗೆ ವರದಿ ಸಲ್ಲಿಕೆ!
ಮುಡಾ ಹಗರಣದ ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್ಗೆ ಸಲ್ಲಿಕೆ ಮಾಡಲಿದ್ದಾರೆ.

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಮುಡಾ ಆಯುಕ್ತರು, ರವಿನ್ಯೂ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿದೆ. ಅಧಿಕಾರಿಗಳು ಅಪರಾಧ ಎಸಗಿರುವ ಬಗ್ಗೆ ಮುಂದೇನು ಮಾಡಬೇಕೆಂಬುದರ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎಂದು ತಿಳಿದು ಬಂದಿದೆ.
ಮುಡಾ ಹಗರಣದ ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್ಗೆ ಸಲ್ಲಿಕೆ ಮಾಡಲಿದ್ದಾರೆ. ಲೋಕಾಯುಕ್ತ ಎಸ್ಪಿ ಟಿಜೆ ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ.
ಮತ್ತೊಂದೆಡೆ, ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ತನಿಖೆಯೂ ಪ್ರಗತಿಯಲ್ಲಿದೆ. ಏತನ್ಮಧ್ಯೆ, ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮನವಿ ಮಾಡಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯೂ ಕರ್ನಾಟಕ ಹೈಕೋರ್ಟ್ನಲ್ಲಿ ನಡೆಯುತ್ತಿದೆ. ಜನವರಿ 27ರಂದು ಸಿಬಿಐ ತನಿಖೆ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡುವ ನಿರೀಕ್ಷೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



