ರಾಜ್ಯ

ಬೆಂಗಳೂರು: ವಿಚ್ಛೇದನದ ಅರ್ಜಿ ಹಿಂಪಡೆಯಲು ಪತ್ನಿ ನಿರಾಕರಣೆ; ಮನೆ ಮುಂದೆಯೇ ಬೆಂಕಿ ಹಚ್ಚಿಕೊಂಡು ವ್ಯಕ್ತಿ ಸಾವು

ಮೃತರನ್ನು ಕುಣಿಗಲ್ ಪಟ್ಟಣದ ನಿವಾಸಿ 39 ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದೆ.

ಬೆಂಗಳೂರು: ವಿಚ್ಛೇದನದ ಅರ್ಜಿ ಹಿಂಪಡೆಯಲು ಪತ್ನಿ ನಿರಾಕರಣೆ; ಮನೆ ಮುಂದೆಯೇ ಬೆಂಕಿ ಹಚ್ಚಿಕೊಂಡು ವ್ಯಕ್ತಿ ಸಾವು
ಪ್ರಾತಿನಿಧಿಕ ಚಿತ್ರ
Published On :

ಬೆಂಗಳೂರು: ವಿಚ್ಛೇದನದ ಅರ್ಜಿಯನ್ನು ಹಿಂಪಡೆಯಲು ಪತ್ನಿ ನಿರಾಕರಿಸಿದ್ದರಿಂದ ಮನನೊಂದ ಪತಿಯೊಬ್ಬ ಆಕೆಯ ಮನೆಯ ಮುಂದೆಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ನಗರದ ನಾಗರಭಾವಿ ಬಡಾವಣೆಯಲ್ಲಿ ಗುರುವಾರ ನಡೆದಿದೆ.

ಮೃತರನ್ನು ತುಮಕೂರಿನ ಕುಣಿಗಲ್ ಪಟ್ಟಣದ ನಿವಾಸಿ 39 ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದೆ. ಅವರು ಕ್ಯಾಬ್ ಚಾಲಕನಾಗಿದ್ದರು. ಮಂಜುನಾಥ್ 2013ರಲ್ಲಿ ವಿವಾಹವಾಗಿದ್ದರು ಮತ್ತು ನಂತರ ಬೆಂಗಳೂರಿನ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದರು. ದಂಪತಿಗೆ 9 ವರ್ಷದ ಗಂಡು ಮಗುವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಂಪತಿ ನಡುವೆ ಭಿನ್ನಾಭಿಪ್ರಾಯ ಮೂಡಿದ್ದರಿಂದ ಮಂಜುನಾಥ್ ಎರಡು ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸಲು ಆರಂಭಿಸಿದ್ದರು. ಇಬ್ಬರೂ ವಿಚ್ಛೇದನ ಪಡೆಯಲು ನ್ಯಾಯಾಲಯ ಮೆಟ್ಟಿಲೇರಿದ್ದರು. ಈ ಮಧ್ಯೆ, ವಿಚ್ಛೇದನ ಅರ್ಜಿಯನ್ನು ಹಿಂಪಡೆಯುವಂತೆ ಮಂಜುನಾಥ್ ಪತ್ನಿ ಬಳಿ ಕೇಳಿದ್ದರು. ಅದೇ ವಿಚಾರವಾಗಿ ಮನವೊಲಿಸಲು ಪತ್ನಿಯ ನಿವಾಸಕ್ಕೆ ಬಂದಿದ್ದರು. ಅರ್ಜಿ ಹಿಂಪಡೆಯಲು ಪತ್ನಿ ನಿರಾಕರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದರಿಂದ ಮನನೊಂದ ಮಂಜುನಾಥ್ ಆಕೆಯ ಮನೆಯ ಕಾರಿಡಾರ್ ಮುಂದೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಬಳಿಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮಗನ ಸಾವಿಗೆ ಆತನ ಪತ್ನಿಯೇ ಕಾರಣ ಎಂದು ಮಂಜುನಾಥ್ ಪೋಷಕರು ಆರೋಪಿಸಿದ್ದಾರೆ. ಈ ಸಂಬಂಧ ಜ್ಞಾನಭಾರತಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದಕ್ಕೂ ಮುನ್ನ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಎಂಬಾತ ತನ್ನ ಪತ್ನಿ ನಿಕಿತಾ ಸಿಂಘಾನಿಯಾ ವಿಚ್ಛೇದನದ ಇತ್ಯರ್ಥಕ್ಕೆ ಚಿತ್ರಹಿಂಸೆ ನೀಡಿ ಮೂರು ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಆತ್ಮಹತ್ಯೆ ಮಾಡಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.