ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ: ವಿಜಯಪುರದಲ್ಲಿ ಮೂವರ ಸಾವು
ಮೃತಪಟ್ಟವರನ್ನು ಅಭಿಷೇಕ್ ಸಾವಂತ್ (34), ವಿಜಯಕುಮಾರ್ ಔರಂಗಾಬಾದ್ (45), ರಾಜು ಗೆಣ್ಣೂರ (30) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಕನ್ನಾಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಮೃತಪಟ್ಟವರನ್ನು ಅಭಿಷೇಕ್ ಸಾವಂತ್ (34), ವಿಜಯಕುಮಾರ್ ಔರಂಗಾಬಾದ್ (45), ರಾಜು ಗೆಣ್ಣೂರ (30) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೆಲಸದ ನಿಮಿತ್ತ ಕಾರಿನಲ್ಲಿ ಐವರು ಸೊಲ್ಲಾಪುರಕ್ಕೆ ಹೋಗಿದ್ದು, ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ. ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಸದ್ಯ ಮೂವರ ಮೃತದೇಹಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



