MUDA ಹಗರಣ: ಲೋಕಾಯುಕ್ತ ಕ್ಲೀನ್ ಚಿಟ್ ಬಗ್ಗೆ ಗೊತ್ತಿಲ್ಲ- ಸಿಎಂ ಸಿದ್ದರಾಮಯ್ಯ
ಮುಡಾದಿಂದ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರಿನಲ್ಲಿ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಅಕ್ರಮವಾಗಿ ತಮಗೆ ಬೇಕಾದಲ್ಲಿ ಸೈಟು ಪಡೆದುಕೊಂಡಿದ್ದಾರೆ ಎಂದು ಆರೋಪ ಕೇಳಿಬಂದಿದ್ದು, ಈ ಹಗರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು.

ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣದಲ್ಲಿ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿರುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದರು.
ಮುಡಾದಿಂದ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರಿನಲ್ಲಿ ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ಅಕ್ರಮವಾಗಿ ತಮಗೆ ಬೇಕಾದಲ್ಲಿ ಸೈಟು ಪಡೆದುಕೊಂಡಿದ್ದಾರೆ ಎಂದು ಆರೋಪ ಕೇಳಿಬಂದಿದ್ದು, ಈ ಹಗರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಹಗರಣ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು.
ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಆರ್‌ಟಿಐ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ಜನವರಿ 27ರಂದು ವಿಚಾರಣೆ ನಡೆಸಲಿರುವ ಹೈಕೋರ್ಟ್, ಅಷ್ಟರೊಳಗೆ ತನಿಖಾ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿತ್ತು.
ವಿಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಇದೀಗ ತನಿಖೆ ಪೂರ್ಣಗೊಳಿಸಿ ವರದಿ ಸಿದ್ಧಪಡಿಸಿದೆ. ಈ ವರದಿಯಲ್ಲಿ ಸಿಎಂ ಮತ್ತು ಪತ್ನಿ ವಿರುದ್ಧದ ಹೇಳಿಕೆಗೆ ಯಾವುದೇ ಪುರಾವೆಯಿಲ್ಲ. ಅಧಿಕಾರಿಗಳಿಂದ ತಪ್ಪಾಗಿತ್ತು ಎಂದು ವರದಿ ನೀಡಲಾಗಿದೆ ಎನ್ನಲಾಗಿದೆ. ಇದನ್ನು ಇನ್ನೂ ಕೋರ್ಟ್ ಗೆ ಸಲ್ಲಿಕೆ ಮಾಡಿಲ್ಲ.
ಈ ಬೆಳವಣಿಗೆ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು, ಏನೂ ಗೊತ್ತಿಲ್ಲಾರೀ.. ಏನೂ ಗೊತ್ತಿಲ್ಲ’ ಎಂದು ತಮ್ಮದೇ ಶೈಲಿಯಲ್ಲಿ ಉತ್ತರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



