ಬಳ್ಳಾರಿ ಜಿಲ್ಲಾಸ್ಪತ್ರೆ ಮಕ್ಕಳ ವೈದ್ಯನ ಅಪಹರಣ: ಭಾರೀ ಹಣಕ್ಕೆ ಬೇಡಿಕೆ
ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗ್ಯಾಂಗ್ ಇಂದು ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದ ವೈದ್ಯ ಡಾ. ಸುನೀಲ್ ಅವರ ಬಾಯಿಗೆ ಬಟ್ಟೆ ತುರುಕಿ ಕಿಡ್ನ್ಯಾಪ್ ಮಾಡಿಕೊಂಡು ಹೋಗಿದೆ.ನಗರದ ಸತ್ಯನಾರಾಯಣ ಪೇಟೆ ಬಳಿ ಅಪಹರಣ ನಡೆದಿದೆ.

ಬಳ್ಳಾರಿ : ಬಳ್ಳಾರಿ ಜಿಲ್ಲಾಸ್ಪತ್ರೆಯ ಖ್ಯಾತ ಮಕ್ಕಳ ವೈದ್ಯ ಡಾ. ಸುನೀಲ್ ಅವರನ್ನು ದುಷ್ಕರ್ಮಿಗಳು ಅಪಹರಣ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗ್ಯಾಂಗ್ ಇಂದು ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದ ವೈದ್ಯ ಡಾ. ಸುನೀಲ್ ಅವರ ಬಾಯಿಗೆ ಬಟ್ಟೆ ತುರುಕಿ ಕಿಡ್ನ್ಯಾಪ್ ಮಾಡಿಕೊಂಡು ಹೋಗಿದೆ. ನಗರದ ಸತ್ಯನಾರಾಯಣ ಪೇಟೆ ಬಳಿ ಅಪಹರಣ ನಡೆದಿದೆ.
ಸುನೀಲ್ ಮೊಬೈಲ್‌ನಿಂದಲೇ ಅವರ ತಮ್ಮ, ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ವೇಣುಗೋಪಾಲ್ ಗುಪ್ತ ಅವರಿಗೆ ಕರೆ ಮಾಡಿರುವ ಅಪಹರಣಕಾರರು 3 ಕೋಟಿಯಷ್ಟು ಹಣ ಮತ್ತು ಚಿನ್ನ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದುತಿಳಿದು ಬಂದಿದೆ. ಸದ್ಯ ಪೊಲೀಸರು ಅಪಹರಣಕಾರರ ಜಾಡು ಪತ್ತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ನಗರದ ಹಲವೆಡೆ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಬಳ್ಳಾರಿ ಹೊರ ವಲಯದ ಮೋಕಾ ಕಡೆಗೆ ಅಪಹರಣಕಾರರು ಹೋಗಿದ್ದಾರೆ ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಈ ಮಾರ್ಗದ ಚೆಕ್‌ಪೋಸ್ಟ್‌ಗಳಲ್ಲಿ ಪರಿಶೀಲನೆ ತೀವ್ರಗೊಳಿಸಲಾಗಿದೆ. ಪ್ರಮುಖ ಪ್ರದೇಶಗಳಲ್ಲಿ ನಾಕಾಬಂಧಿ ಹಾಕಲಾಗಿದೆ. ಜಿಲ್ಲೆಯ ಪ್ರಮುಖ ಪೊಲೀಸ್ ಅಧಿಕಾರಿಗಳನ್ನು ತನಿಖೆಯಲ್ಲಿ ತೊಡಿಗಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



