ಕೇಂದ್ರ ಬಜೆಟ್ನಲ್ಲಿ ಬೆಂಗಳೂರಿಗೆ ಹೆಚ್ಚಿನ ಆದ್ಯತೆ ನೀಡಿ: ನಿರ್ಮಲಾ ಸೀತಾರಾಮನ್ಗೆ ಡಿಕೆಶಿ ಪತ್ರ
ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು 2025ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸುತ್ತಿದ್ದು, ಬಜೆಟ್ನಲ್ಲಿ ಬೆಂಗಳೂರಿಗೆ ಹೆಚ್ಚಿನ ಅನುದಾನ ನೀಡುವಂತೆ ಡಿಸಿಎಂ ಮನವಿ ಮಾಡಿದ್ದಾರೆ.

ಬೆಂಗಳೂರು: ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನ ಅಗತ್ಯಗಳನ್ನು ಪೂರೈಸಲು ಕೇಂದ್ರ ಬಜೆಟ್ನಲ್ಲಿ ಹೆಚ್ಚಿನ ಆರ್ಥಿಕ ನೆರವು ನೀಡುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು 2025ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸುತ್ತಿದ್ದು, ಬಜೆಟ್ನಲ್ಲಿ ಬೆಂಗಳೂರಿಗೆ ಹೆಚ್ಚಿನ ಅನುದಾನ ನೀಡುವಂತೆ ಡಿಸಿಎಂ ಮನವಿ ಮಾಡಿದ್ದಾರೆ.
ಸೀತಾರಾಮನ್ ಅವರಿಗೆ ಬರೆದ ಪತ್ರದಲ್ಲಿ, ಭಾರತದ ತಂತ್ರಜ್ಞಾನ ಕೇಂದ್ರವಾಗಿ ಬೆಂಗಳೂರು ನಿರ್ಣಾಯಕ ಪಾತ್ರವನ್ನು ವಹಿಸುತ್ತಿದೆ ಮತ್ತು "ದೇಶದ ಸಿಲಿಕಾನ್ ವ್ಯಾಲಿ" ಎಂಬ ಸ್ಥಾನಮಾನವನ್ನು ಕಾಯ್ದುಕೊಳ್ಳಲು ನಗರದ ತುರ್ತು ಅವಶ್ಯಕತೆಗಳನ್ನು ಪೂರೈಸುವ ಅಗತ್ಯ ಇದೆ ಎಂದು ಒತ್ತಿ ಹೇಳಿದ್ದಾರೆ.
1.5 ಕೋಟಿಗೂ ಹೆಚ್ಚು ಜನಸಂಖ್ಯೆ ಹೊಂದಿರುವ ಬೆಂಗಳೂರು, ವಿಶೇಷವಾಗಿ ತಂತ್ರಜ್ಞಾನ ವಲಯದಲ್ಲಿ ಅಗಾಧ ಬೆಳವಣಿಗೆಯನ್ನು ಕಂಡಿದ್ದು, ದೇಶೀಯ ಮತ್ತು ಅಂತರರಾಷ್ಟ್ರೀಯ ಹೂಡಿಕೆಗಳನ್ನು ಆಕರ್ಷಿಸುತ್ತಿದೆ.
ಆದಾಗ್ಯೂ, ನಗರದಲ್ಲಿ ಅಸ್ತಿತ್ವದಲ್ಲಿರುವ ಮೂಲಸೌಕರ್ಯಗಳು ಅದರ ಬೆಳೆಯುತ್ತಿರುವ ಜನಸಂಖ್ಯೆ ಮತ್ತು ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಯ ಬೇಡಿಕೆಗಳನ್ನು ಪೂರೈಸಲು ಹೆಣಗಾಡುತ್ತಿದೆ ಎಂದು ಡಿಕೆ ಶಿವಕುಮಾರ್ ಗಮನಸೆಳೆದಿದ್ದಾರೆ.
ಬೆಂಗಳೂರು ಉತ್ತರ- ದಕ್ಷಿಣ ಕಾರಿಡಾರ್ಗೆ 15 ಸಾವಿರ ಕೋಟಿ ರೂ. ಪೂರ್ವದಿಂದ ಪಶ್ಚಿಮ ಕಾರಿಡಾರ್ಗೆ 25 ಸಾವಿರ ಕೋಟಿ ರೂ. ರಿಂಗ್ ರಸ್ತೆ ಮೇಲ್ದರ್ಜೆಗೆ 8,916 ಕೋಟಿ ರೂ. ಗಳ ಅಗತ್ಯ ಇದೆ. ಬೆಂಗಳೂರಿನ ಪ್ರಮುಖ 17 ಫ್ಲೈ ಓವರ್ಗೆ 12 ಸಾವಿರ ಕೋಟಿ ರೂ. ಅಗತ್ಯವಿದೆ ಎಂದು ಡಿಸಿಎಂ ಉಲ್ಲೇಖಿಸಿದ್ದಾರೆ.
ರಾಜ ಕಾಲುವೆ ನಿರ್ಣಹಣೆ, ವಿಸ್ತರಣೆಗೆ 3 ಸಾವಿರ ಕೋಟಿ ರೂ. ಅಗತ್ಯ ಇದೆ. ಬಿಸಿನೆಸ್ ಕಾರಿಡಾರ್ಗೆ 27 ಸಾವಿರ ಕೋಟಿ ಅನುದಾನ ಅಗತ್ಯವಿದೆ. ಹೀಗಾಗಿ ಈ ಬಾರಿಯ ಬಜೆಟ್ನಲ್ಲಿ ಬೆಂಗಳೂರಿಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಡಿಸಿಎಂ, ಕೇಂದ್ರ ಹಣಕಾಸು ಸಚಿವರಿಗೆ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



