ರಾಜ್ಯ

ಗಣರಾಜ್ಯೋತ್ಸವ 2025: ರಾಜಭವನ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ

ಪ್ರವೇಶದ ಸಮಯ ಸಂಜೆ 6 ರಿಂದ 7:30ವರೆಗೆ ಇರಲಿದ್ದು, ಸಾರ್ವಜನಿಕರು ಮುಖ್ಯದ್ವಾರದ ಮೂಲಕ ಉಚಿತ ಪ್ರವೇಶ ಪಡೆಯಬಹುದಾಗಿದೆ.

ಗಣರಾಜ್ಯೋತ್ಸವ 2025: ರಾಜಭವನ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ
ರಾಜಭವನ (ಸಂಗ್ರಹ ಚಿತ್ರ)
Published On :

ಬೆಂಗಳೂರು: 76ನೇ ಗಣರಾಜ್ಯೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ರಾಜಭವನಕ್ಕೆ ಸಾರ್ವಜನಿಕರ ಪ್ರವೇಶವನ್ನು ಕಲ್ಪಿಸಲಾಗಿದೆ.

ಪ್ರವೇಶದ ಸಮಯ ಸಂಜೆ 6 ರಿಂದ 7:30ವರೆಗೆ ಇರಲಿದ್ದು, ಸಾರ್ವಜನಿಕರು ಮುಖ್ಯದ್ವಾರದ ಮೂಲಕ ಉಚಿತ ಪ್ರವೇಶ ಪಡೆಯಬಹುದಾಗಿದೆ. ರಾಜಭವನ ಪ್ರವೇಶ ಪಡೆಯಲಿಚ್ಚಿಸುವವರು ಆಧಾರ್ ಕಾರ್ಡ್ ಅಥವಾ ಭಾವಚಿತ್ರವಿರುವ ಅಧಿಕೃತ ಗುರುತಿನ ಚೀಟಿಯನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ.

ಯಾವುದೇ ರೀತಿಯ ಕ್ಯಾಮೆರಾ, ಕೈ ಚೀಲ, ಚೂಪಾದ ವಸ್ತುಗಳು, ತಿಂಡಿ-ತಿನಿಸು, ಪ್ಲಾಸ್ಟಿಕ್ ವಸ್ತುಗಳು ಇನ್ನಿತರ ಯಾವುದೇ ಲಗೇಜ್ ಬ್ಯಾಗ್ ತರುವಂತಿಲ್ಲ. ರಾಜಭವನದ ಒಳಗಡೆ ವಾಹನ ನಿಲುಗಡೆಗೆ ಅವಕಾಶವಿರುವುದಿಲ್ಲ, ಸಾರ್ವಜನಿಕರು ಭದ್ರತಾ ಸಿಬ್ಬಂದಿ ನೀಡುವ ಸೂಚನೆಗಳನ್ನು ಪಾಲಿಸಿ, ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.