ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬಜೆಟ್ ನಲ್ಲಿ 5 ಸಾವಿರ ಕೋಟಿ ರೂ ಮೀಸಲಿಡಿ: ನಿರ್ಮಲಾ ಸೀತರಾಮನ್ ಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ (ಕೆಕೆಆರ್‌ಡಿಬಿ) ವಾರ್ಷಿಕವಾಗಿ 5 ಸಾವಿರ ಕೋಟಿ ರೂ.ಗಳನ್ನು ನಿಗದಿಪಡಿಸಿದೆ, 2024-25 ರ ಆರ್ಥಿಕ ವರ್ಷಕ್ಕೆ ಕೂಡ ಇದು ಅನ್ವಯವಾಗುತ್ತದೆ.

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ದಿಗಾಗಿ ಈ ಸಲ ಕೇಂದ್ರದ ಬಜೆಟ್ ನಲ್ಲಿ 5 ಸಾವಿರ ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಗೆ ಕ್ರಮವಹಿಸುವಂತೆ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ಈ ಸಂಬಂಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‍ಗೆ ಪತ್ರ ಬರೆದಿರುವ ಅವರು, ಕಲ್ಯಾಣ ಕರ್ನಾಟಕ ಪ್ರದೇಶ ಶೈಕ್ಷಣಿಕ, ಆರೋಗ್ಯ, ಮೂಲಭೂತ ಸೌಲಭ್ಯ ಇತ್ಯಾದಿ ಕ್ಷೇತ್ರಗಳಲ್ಲಿ ಹಿಂದುಳಿದಿದ್ದು ಈ ಎಲ್ಲ ಕ್ಷೇತ್ರಗಳ ಅಭಿವೃದ್ದಿ ಪಡಿಸಲು ಆರ್ಥಿಕ ಸವಾಲು ಎದುರಿಸುತ್ತಿತ್ತು. ಈ ಹಿನ್ನೆಲೆಯಲ್ಲಿ ಅಂದಿನ ಯುಪಿಎ ಸರಕಾರ ಸಂವಿಧಾನಕ್ಕೆ ಅಗತ್ಯ ತಿದ್ದುಪಡಿ ತಂದು ಆರ್ಟಿಕಲ್ 371 (ಜೆ) ಜಾರಿಗೊಳಿಸಿ ಈ ಭಾಗದ ಸಮಗ್ರ ಅಭಿವೃದ್ದಿಗೆ ಶ್ರಮವಹಿಸಿತ್ತು ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಸಮಸ್ಯೆಗಳನ್ನು ಪರಿಹರಿಸಲು ಸಾಕಷ್ಟು ಪ್ರಯತ್ನಗಳನ್ನು ಮಾಡಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ (ಕೆಕೆಆರ್‌ಡಿಬಿ) ವಾರ್ಷಿಕವಾಗಿ 5 ಸಾವಿರ ಕೋಟಿ ರೂ.ಗಳನ್ನು ನಿಗದಿಪಡಿಸಿದೆ, 2024-25 ರ ಆರ್ಥಿಕ ವರ್ಷಕ್ಕೆ ಕೂಡ ಇದು ಅನ್ವಯವಾಗುತ್ತದೆ. ಇದರ ಜೊತೆಗೆ ಅಭಿವೃದ್ಧಿಗೆ ಹಲವಾರು ಯೋಜನೆ ಹಾಕಿಕೊಂಡಿದೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕ ಸರಕಾರ ತನ್ನದೇ ಮಾದರಿಯಲ್ಲಿ ಕೇಂದ್ರ ಸರಕಾರದಿಂದ 5 ಸಾವಿರ ಕೋಟಿ ರೂ. ವಿಶೇಷ ಅನುದಾನಕ್ಕೆ ಒತ್ತಾಯಿಸುವ ನಿರ್ಣಯವನ್ನು ಅಂಗೀಕರಿಸಿದೆ. ಪ್ರದೇಶದ ಅಭಿವೃದ್ಧಿಯ ಅಗತ್ಯಗಳನ್ನು ಪರಿಹರಿಸಲು, ಪ್ರಮುಖ ಯೋಜನೆಗಳ ಕಾರ್ಯಗತಗೊಳಲು ಮತ್ತು ಈ ಭಾಗದ ಜನರ ಸಾಮಾಜಿಕ-ಆರ್ಥಿಕ ಪರಿಸ್ಥಿತಿಗಳನ್ನು ಸುಧಾರಿಸಲು ಈ ನಿರ್ಣಾಯಕ ನಿಧಿಯು ಅತ್ಯಗತ್ಯವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಪ್ರತಿಪಾದಿಸಿದ್ದಾರೆ.
ಈ ಎಲ್ಲ ಹಿನ್ನೆಲೆಯಲ್ಲಿ, ಮುಂಬರುವ ಕೇಂದ್ರ ಬಜೆಟ್‍ನಲ್ಲಿ ಹೈದರಾಬಾದ್-ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ.ವಿಶೇಷ ಅನುದಾನವನ್ನು ಒದಗಿಸುವಂತೆ ಒತ್ತಾಯಿಸಿ, ಈ ಅನುದಾನ ಕಲ್ಯಾಣ ಕರ್ನಾಟಕ ಪ್ರದೇಶದ ಪ್ರಗತಿಯನ್ನು ಗಮನಾರ್ಹವಾಗಿ ವೇಗಗೊಳಿಸುವುದರ ಜೊತೆಗೆ ಹಲವಾರು ನಿರ್ಣಾಯಕ ಅಭಿವೃದ್ಧಿ ಸವಾಲುಗಳನ್ನು ಎದುರಿಸಲು ಸಹಕಾರಿಯಾಗುತ್ತದೆ ಎಂದು ಮಲ್ಲಿಕಾರ್ಜುನ ಖರ್ಗೆ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



