ಬೆಂಗಳೂರು: ಮೊಬೈಲ್ ಗೀಳಿಗೆ ಪ್ರಾಣ ಕಳೆದುಕೊಂಡ 13 ವರ್ಷದ ಬಾಲಕ; ಉಡದಾರದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ
ಧ್ರುವ ಆತ್ಮಹತ್ಯೆಗೆ ಶರಣಾದ ಬಾಲಕ. ಈತ 9 ವರ್ಷದ ತಂಗಿಯ ಮುಂದೆಯೇ ಉಡದಾರದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಂಗಳೂರು: ಮೊಬೈಲ್ ಗೀಳಿಗೆ 13 ವರ್ಷದ ಬಾಲಕನೋರ್ವ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ನಡೆದಿದೆ.
ಧ್ರುವ ಆತ್ಮಹತ್ಯೆಗೆ ಶರಣಾದ ಬಾಲಕ. ಈತ 9 ವರ್ಷದ ತಂಗಿಯ ಮುಂದೆಯೇ ಉಡದಾರದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವೇಳೆ ಅಣ್ಣ ಏನು ಮಾಡುತ್ತಿದ್ದಾನೆ ಎಂಬ ಅರಿವು ಇಲ್ಲದೆ ತಂಗಿ ಸುಮ್ಮನೆ ನೋಡುತ್ತಿದ್ದಳು ಎನ್ನಲಾಗಿದೆ.
ಧ್ರುವ ಮನೆಯವರ ಮಾತು ಕೇಳದೆ ಹೆಚ್ಚಾಗಿ ಮೊಬೈಲ್ ಬಳಸುತ್ತಿದ್ದ ಎಂದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮಂಗಳವಾರ ಪೋಷಕರು ಕೆಲಸಕ್ಕೆ ತೆರಳಿದ್ದರು. ಶಾಲೆ ಮುಗಿಸಿ ಬಂದ ಅಣ್ಣ-ತಂಗಿ ಮಾತ್ರ ಮನೆಯಲ್ಲಿದ್ದರು. ಆಗ ಬಾಲಕ ಪ್ಯಾಂಟ್ ತೆಗೆದು ಸೊಂಟದ ಉಡದಾರ ಫ್ಯಾನ್‌ಗೆ ಕಟ್ಟಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಸಂಜೆ 7 ಗಂಟೆಯ ಸುಮಾರಿಗೆ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆಗ ಉಡದಾರ ಕುತ್ತಿಗೆಗೆ ಬಿಗಿದು, ತುಂಡಾಗಿ ಬಾಲಕ ಕೆಳಗೆ ಬಿದ್ದಿದ್ದಾನೆ. ಬಾಲಕ ಕೆಳಗೆ ಬಿದ್ದ ಸಮಯಕ್ಕೆ ಕೆಲಸ ಮುಗಿಸಿ ತಾಯಿ ಬಂದಿದ್ದಾರೆ. ಘಟನೆ ನೋಡಿ ಆತಂಕಗೊಂಡ ತಾಯಿ ಅಕ್ಕಪಕ್ಕದವರ ಸಹಾಯ ಪಡೆದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಬಾಲಕನನ್ನು ಪರೀಕ್ಷಿಸಿದ ವೈದ್ಯರು ಆತ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



