ರಾಜ್ಯ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್; ಸುಗ್ರೀವಾಜ್ಞೆಗೆ ಸಚಿವ ಸಂಪುಟ ಅನಮೋದನೆ

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್​ಕೆ ಪಾಟೀಲ್ ಅವರು, ಫೈನಾನ್ಸ್​​​ಗಳಿಗೆ ಕಡಿವಾಣ ಹಾಕಲು ಸುಗ್ರೀವಾಜ್ಞೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದರು.

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್; ಸುಗ್ರೀವಾಜ್ಞೆಗೆ ಸಚಿವ ಸಂಪುಟ ಅನಮೋದನೆ
ಎಚ್​ಕೆ ಪಾಟೀಲ್
Published On :

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ನಿರ್ಧರಿಸಿರುವ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಸುಗ್ರೀವಾಜ್ಞೆ ತರಲು ಗುರುವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹೊಸದಾಗಿ ಜಾರಿಗೆ ತರುವ ಮಸೂದೆಗೆ ಒಪ್ಪಿಗೆ ನೀಡಲಾಗಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್​ಕೆ ಪಾಟೀಲ್ ಅವರು, ಫೈನಾನ್ಸ್​​​ಗಳಿಗೆ ಕಡಿವಾಣ ಹಾಕಲು ಸುಗ್ರೀವಾಜ್ಞೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದರು.

ಅಮಾನವೀಯವಾಗಿ ಮೈಕ್ರೋ ಪೈನಾನ್ಸ್​ನಿಂದ ಸಾಲ ವಸೂಲಿ ಆಗುತ್ತಿದೆ. ಇಂದು ಕೂಡ ಆತ್ಮಹತ್ಯೆ ಪ್ರಕರಣ ವರದಿಯಾಗಿದ್ದು, ಮಸೂದೆ ತರಲು ತೀರ್ಮಾನಿಸಿ ಕೆಲವು ತಾಂತ್ರಿಕ ಅಂಶಗಳ ಬಗ್ಗೆ ಚರ್ಚಿಸಿದ್ದೇವೆ. ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿಗಳು ಹಿರಿಯ ಸಚಿವರ ಸಭೆ ಕರೆದಿದ್ದಾರೆ. ಕೆಲವು ಮಹತ್ವದ ವಿಚಾರ ಇರುವುದರಿಂದ ಸಭೆ ಮಾಡುತ್ತಿದ್ದೇವೆ. ಸಂಜೆ 4 ಗಂಟೆಗೆ ಮಸೂದೆಗೆ ಸ್ಪಷ್ಟ ಚಿತ್ರಣ ನೀಡುತ್ತೇವೆ ಎಂದು ತಿಳಿಸಿದರು.

ಸುಗ್ರೀವಾಜ್ಞೆ ತರಲು ಸಿಎಂಗೆ ಸಚಿವ ಸಂಪುಟ ಅಧಿಕಾರವನ್ನು ನೀಡಿದೆ. ಸಿಎಂ ಜೊತೆ ಸಭೆಯ ಬಳಿಕ ಕಾನೂನಾತ್ಮಕವಾಗಿ ತಿರ್ಮಾನ ಆಗಲಿದೆ. ಸಂಪುಟ ಸಭೆಯಲ್ಲಿ ಸಂಪೂರ್ಣ ಅಧಿಕಾರ ಸಿಎಂ ಅವರಿಗೆ ನೀಡಲಾಗಿದೆ. ನಮ್ಮಲ್ಲಿರುವ ಕಾನೂನುಗಳು ಕೆಲವು ಪ್ಲಸ್ ಆಗಲಿವೆ. ಕೆಲವು ಮೈನಸ್ ಆಗಲಿವೆ. ಹೀಗಾಗಿ ಕಾನೂನಾತ್ಮಕ ತೀರ್ಮಾನಕ್ಕೆ ಸಂಜೆ ಹಿರಿಯ ಸಚಿವರ ಸಭೆ ಕರೆಯಲಾಗಿದೆ ಎಂದು ಎಚ್ ಕೆ ಪಾಟೀಲ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.