ಮಹಾ ಕುಂಭ ಮೇಳದಲ್ಲಿ ಕಾಲ್ತುಳಿತ: ಕನ್ನಡಿಗರ ರಕ್ಷಣೆಗಾಗಿ ಸರ್ಕಾರ ಸಹಾಯವಾಣಿ ಆರಂಭ
ಮಹಾಕುಂಭ ಮೇಳಕ್ಕೆ ತೆರಳಿದ್ದು, ಸಂಪರ್ಕಕ್ಕೆ ಸಿಗದ ಯಾತ್ರಿಕರ ರಕ್ಷಣೆಗಾಗಿ ಸಹಾಯವಾಣಿಯನ್ನು ತೆರೆಯಲಾಗಿದೆ. ಸಹಾಯವಾಣಿ ಸಂಖ್ಯೆ 080- 22340676ಗೆ ಸಂಪರ್ಕಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ.

ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಕರ್ನಾಟಕದಿಂದ ತೆರಳಿದ್ದ ಬೆಳಗಾವಿಯ ನಾಲ್ವರು ಮೌನಿ ಅಮವ್ಯಾಸೆ ದಿನದಂದು ಸಂಭವಿಸಿದ ಕಾಲ್ಕುಳಿತದಲ್ಲಿ ಸಿಲುಕಿ ಸಾವನ್ನಪ್ಪಿದ್ದ ಬೆನ್ನಲ್ಲೇ ರಾಜ್ಯ ಸರ್ಕಾರ ಕನ್ನಡಿಗರ ರಕ್ಷಣೆಗೆ ಧಾವಿಸಿದೆ.
ಮಹಾಕುಂಭ ಮೇಳಕ್ಕೆ ತೆರಳಿದ್ದು, ಸಂಪರ್ಕಕ್ಕೆ ಸಿಗದ ಯಾತ್ರಿಕರ ರಕ್ಷಣೆಗಾಗಿ ಸಹಾಯವಾಣಿಯನ್ನು ತೆರೆಯಲಾಗಿದೆ. ಸಹಾಯವಾಣಿ ಸಂಖ್ಯೆ 080- 22340676ಗೆ ಸಂಪರ್ಕಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ.
ಇನ್ನೂ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದ್ದ ನಾಲ್ವರ ಮೃತದೇಹಗಳನ್ನು ಆಂಬ್ಯುಲೆನ್ಸ್ ಮೂಲಕ ದೆಹಲಿಗೆ ರವಾನಿಸಲಾಗಿದ್ದು, ಇಂದು ಮಧ್ಯಾಹ್ನ ದೆಹಲಿಯಿಂದ ಬೆಳಗಾವಿಗೆ ಏರ್ ಲಿಫ್ಟ್ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ, ಅವರ ಮಗಳು ಮೇಘಾ, ಶೆಟ್ಟಿಗಲ್ಲಿಯ ಅರುಣ್ ಕೋಪರ್ಡೆ ಹಾಗೂ ಮಹಾದೇವಿ ಮೃತಪಟ್ಟು ದುರ್ದೈವಿಗಳು. ಮೃತದೇಹಗಳನ್ನು ಬೆಳಗಾವಿಗೆ ಏರ್ ಶಿಫ್ಟ್ ಮಾಡಲಾಗುತ್ತಿದ್ದು,ಇದಕ್ಕಾಗಿ ಬೆಳಗಾವಿಯಿಂದ ಇಬ್ಬರು ಅಧಿಕಾರಿಗಳು ಪ್ರಯಾಗ್ ರಾಜ್ ಗೆ ತೆರಳಿರುವುದಾಗಿ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


