ರಾಜ್ಯ

ಬೆಂಗಳೂರು ಗ್ರಾಮಾಂತರ, ಬಾಗೇಪಲ್ಲಿ ಹೆಸರು ಬದಲಾವಣೆಗೆ ಸಚಿವ ಸಂಪುಟ ಅನುಮೋದನೆ

ಇಂದು ನಂದಿ ಗಿರಿಧಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರುನಾಮಕರಣ.

ಬೆಂಗಳೂರು ಗ್ರಾಮಾಂತರ, ಬಾಗೇಪಲ್ಲಿ ಹೆಸರು ಬದಲಾವಣೆಗೆ ಸಚಿವ ಸಂಪುಟ ಅನುಮೋದನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿಬೆಟ್ಟದ ವಿಶೇಷ ಸಂಪುಟ ಸಭೆಗೆ ತೆರಳುವ ಮುನ್ನ ಭೋಗ ನಂದೀಶ್ವರ ದೇವಸ್ಥಾನಕ್ಕೆ ಸಂಪುಟ ಸಹದ್ಯೋಗಿಗಳ ಜೊತೆ ಭೇಟಿ ನೀಡಿ ನಂತರ ಫೋಟೋ ತೆಗೆಸಿಕೊಂಡರು.
Published On :

ಚಿಕ್ಕಬಳ್ಳಾಪುರ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಮನಗರ ನಂತರ ಮತ್ತೊಂದು ಜಿಲ್ಲೆಯ ಹೆಸರು ಬದಲಾವಣೆಗೆ ನಿರ್ಧರಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಬುಧವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಇಂದು ನಂದಿ ಗಿರಿಧಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯನ್ನು ಭಾಗ್ಯನಗರ ಎಂದು ಮರು ನಾಮಕರಣ ಮಾಡಲು ಅನುಮೋದನೆ ನೀಡಲಾಗಿದೆ.

ಈಗಾಗಲೇ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲಾಗಿದೆ. ಇದೀಗ ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ತಾಲ್ಲೂಕುಗಳನ್ನೊಳಗೊಂಡ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣ ಮಾಡಲಾಗಿದೆ.

ಇನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣಕ್ಕೆ ಭಾಗ್ಯನಗರ ಎಂದು ಹೆಸರಿಡಬೇಕು ಎಂದು ಸ್ಥಳೀಯ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಬಗ್ಗೆ ಇಂದು ಸಂಪುಟದಲ್ಲಿ ಚರ್ಚಿಸಿ, ಅನುಮೋದನೆ ನೀಡಿದ್ದು, ಬಾಗೇಪಲ್ಲಿ ಇನ್ಮುಂದೆ ’ಭಾಗ್ಯನಗರ’ ಎಂದು ಬದಲಾಗಲಿದೆ.

ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಜೊತೆಗೆ ಚಿತ್ರದುರ್ಗ, ಶಿವಮೊಗ್ಗ, ವಿಜಯನಗರ, ಕೊಪ್ಪಳ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳ ಅಭಿವೃದ್ಧಿ ಕಾರ್ಯಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.