ರಾಜ್ಯ

ಮಂಡ್ಯ: ಒಂದೇ ಫ್ಯಾನ್ ಗೆ ನೇಣು ಬಿಗಿದುಕೊಂಡು ತಾಯಿ-ಮಗಳು ಆತ್ಮಹತ್ಯೆ!

ಪತಿಯಿಂದ ದೂರವಾಗಿದ್ದ ರಶ್ಮಿ ಮಂಡ್ಯದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಒಂಟಿ ಜೀವನದಿಂದ ಹತಾಶಳಾಗಿ ಪ್ರಾಣ ಕಳೆದುಕೊಳ್ಳುವ ನಿರ್ಧಾರ ತೆಗೆದುಕೊಂಡಿರುವುದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ

ಮಂಡ್ಯ: ಒಂದೇ ಫ್ಯಾನ್ ಗೆ ನೇಣು ಬಿಗಿದುಕೊಂಡು ತಾಯಿ-ಮಗಳು ಆತ್ಮಹತ್ಯೆ!
ಸಾಂದರ್ಭಿಕ ಚಿತ್ರ
Published On :

ಮಂಡ್ಯ: ಒಂದೇ ಫ್ಯಾನ್ ಗೆ ನೇಣು ಬಿಗಿದುಕೊಂಡು ತಾಯಿ-ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದ ನೆಹರುನಗರ ಬಡಾವಣೆಯಲ್ಲಿ ಬುಧವಾರ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ರಶ್ಮಿ (28) ಮತ್ತು ಆಕೆಯ 9 ವರ್ಷದ ಪುತ್ರಿ ಎಂದು ಗುರುತಿಸಲಾಗಿದೆ.

ಪತಿಯಿಂದ ದೂರವಾಗಿದ್ದ ರಶ್ಮಿ ಮಂಡ್ಯದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಒಂಟಿ ಜೀವನದಿಂದ ಹತಾಶಳಾಗಿ ಪ್ರಾಣ ಕಳೆದುಕೊಳ್ಳುವ ನಿರ್ಧಾರ ತೆಗೆದುಕೊಂಡಿರುವುದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಯಿ ಮತ್ತು ಮಗಳು ಇಬ್ಬರೂ ಒಂದೇ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾರೆ. ಘಟನಾ ಸ್ಥಳದಿಂದ ಡೆತ್ ನೋಟ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಂಡ್ಯ ಪೂರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.