ಚಿಕ್ಕಮಗಳೂರು: ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಬೆತ್ತಲೆ ಸ್ಥಿತಿಯಲ್ಲಿ ಶವವಾಗಿ ಪತ್ತೆ
33 ವರ್ಷದ ಶರತ್ ಅವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ನೀಲಗಿರಿ ಪ್ಲಾಂಟೇಶನ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವಾಗಲೇ ನಾಪತ್ತೆಯಾಗಿದ್ದರು.

ಚಿಕ್ಕಮಗಳೂರು: ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶರತ್ ಅವರು ಶುಕ್ರವಾರ ಬೆತ್ತಲೆ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
33 ವರ್ಷದ ಶರತ್ ಅವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ನೀಲಗಿರಿ ಪ್ಲಾಂಟೇಶನ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವಾಗಲೇ ನಾಪತ್ತೆಯಾಗಿದ್ದರು.
ನೀಲಗಿರಿ ಪ್ಲಾಂಟೇಶನ್ ನಿಂದ 5 ಕಿಮೀ ದೂರದಲ್ಲಿ ಇಂದು ಬೆತ್ತಲೆ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಶರತ್ ಅವರ ಶವ ಪತ್ತೆಯಾಗಿದೆ.
ಶರತ್ ಮೂಲತಃ ಕೊಡಗು ಜಿಲ್ಲೆಯ ಕಾಲೂರು ನಿವಾಸಿಯಾಗಿದ್ದು. ಕಳೆದ ನಾಲ್ಕು ತಿಂಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ KFDC ವಿಭಾಗದಿಂದ ಸಖರಾಯಪಟ್ಟಣ ಅರಣ್ಯ ಇಲಾಖೆಯ KFDC ವಿಭಾಗಕ್ಕೆ ವರ್ಗಾವಣೆಯಾಗಿದ್ದರು. ನೀಲಗಿರಿ ಪ್ಲಾಂಟೇಶನ್ ನಲ್ಲಿ ಜೂನ್ 24 ರಂದು ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಶರತ್ ನಿಗೂಢವಾಗಿ ನಾಪತ್ತೆಯಾಗಿದ್ದರು.
ಶರತ್ ಗಾಗಿ ನೂರಾರು ಅರಣ್ಯ ಇಲಾಖೆಯ ಸಿಬ್ಬಂದಿ, ಪೊಲೀಸರು ನೀಲಗಿರಿ ಪ್ಲಾಂಟೇಶನ್, ಅರಣ್ಯದಲ್ಲಿ ಹುಡುಕಾಟ ನಡೆಸಿದ್ದರು. ಹುಡುಕಾಟದ ವೇಳೆ ಶರತ್ ಬೈಕ್ ಒಂದು ಕಡೆ ಸಿಕ್ಕಿದ್ರೆ ಬಟ್ಟೆ ಪರ್ಸ್ ಮತ್ತೊಂದು ದಿಕ್ಕಿನಲ್ಲಿ ಪತ್ತೆಯಾಗಿತ್ತು. ಮೊಬೈಲ್ ಶರತ್ ಶವ ಸಿಕ್ಕ ಸ್ಥಳದಿಂದ 20 ಕಿಮೀ ದೂರದಲ್ಲಿ ಪತ್ತೆಯಾಗಿತ್ತು. ಇಂದು ಚಿಕ್ಕಮಗಳೂರು, ಹಾಸನ ಅರಣ್ಯ ಇಲಾಖೆಯ ನೂರಾರು ಸಿಬ್ಬಂದಿಗಳು, ಪೊಲೀಸರು ಅರಣ್ಯದಲ್ಲಿ ಹುಡುಕಾಟ ನಡೆಸುವಾಗ ಶರತ್ ಶವ ಪತ್ತೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



