ರಾಜ್ಯ

ಜುಲೈ 8 ರಂದು ಬಿಬಿಎಂಪಿ ಸೇರಿ ರಾಜ್ಯದ 10 ಮಹಾನಗರ ಪಾಲಿಕೆಗಳಿಂದ ಬಂದ್ ಗೆ ಕರೆ

ನೌಕರರ ಮುಷ್ಕರದಿಂದಾಗಿ ಮಂಗಳವಾರ ರಾಜ್ಯದ 10 ಮಹಾನಗರ ಪಾಲಿಕೆಗಳು ಸಂಪೂರ್ಣ ಬಂದ್ ಆಗಲಿದ್ದು, ಪಾಲಿಕೆಗಳ ನೌಕರರು ಸಾಮೂಹಿಕವಾಗಿ ರಜೆ ಹಾಕಿ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಜುಲೈ 8 ರಂದು ಬಿಬಿಎಂಪಿ ಸೇರಿ ರಾಜ್ಯದ 10 ಮಹಾನಗರ ಪಾಲಿಕೆಗಳಿಂದ ಬಂದ್ ಗೆ ಕರೆ
ಬಿಬಿಎಂಪಿ ಕಚೇರಿ
Published On :

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಸೇರಿದಂತೆ ರಾಜ್ಯದ 10 ಮಹಾನಗರ ಪಾಲಿಕೆಗಳ ನೌಕರರು ಜುಲೈ 8 ರಂದು ಬಂದ್ ಗೆ ಕರೆ ನೀಡಿದ್ದಾರೆ.

ನೌಕರರ ಮುಷ್ಕರದಿಂದಾಗಿ ಮಂಗಳವಾರ ರಾಜ್ಯದ 10 ಮಹಾನಗರ ಪಾಲಿಕೆಗಳು ಸಂಪೂರ್ಣ ಬಂದ್ ಆಗಲಿದ್ದು, ಪಾಲಿಕೆಗಳ ನೌಕರರು ಸಾಮೂಹಿಕವಾಗಿ ರಜೆ ಹಾಕಿ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಬಿಬಿಎಂಪಿ, ಹುಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ತುಮಕೂರು ಮಹಾನಗರ ಪಾಲಿಕೆ, ಮಂಗಳೂರು ಮಹಾನಗರ ಪಾಲಿಕೆ, ಶಿವಮೊಗ್ಗ ಮಹಾನಗರ ಪಾಲಿಕೆ, ದಾವಣಗೆರೆ ಮಹಾನಗರ ಪಾಲಿಕೆ, ಮೈಸೂರು ಮಹಾನಗರ ಪಾಲಿಕೆ ಹಾಗೂ ಬೆಳಗಾವಿ ಮಹಾನಗರ ಪಾಲಿಕೆಯ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ.

ಬಿಬಿಎಂಪಿಯಲ್ಲಿ ಸುಮಾರು 6000ಕ್ಕೂ ಹೆಚ್ಚು ವಿವಿಧ ವೃಂದದ ಅಧಿಕಾರಿ/ನೌಕರರ ಹುದ್ದೆಗಳು ಖಾಲಿ ಇವೆ. ಹೀಗಾಗಿ, ಹಾಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ/ ನೌಕರರು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಮಧ್ಯೆ ಯಾವುದೇ ನೋಟಿಸ್ ನೀಡದೆ ನೌಕರರನ್ನು ಅಮಾನತ್ತು ಮಾಡಿರುವುದನ್ನು, ತೆರವುಗೊಳಿಸುವಂತೆ ಅನೇಕ ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ, ಈವರೆಗೂ ಯಾವುದೇ ರೀತಿ ಕ್ರಮ ವಹಿಸಿಲ್ಲ ಎಂದು ನೌಕರರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.