ರಾಜ್ಯ

ಗಾಣಿಗ ಮಠ ಅನುದಾನಕ್ಕೂ ಕಮಿಷನ್: ಸ್ವಾಮೀಜಿ ಆರೋಪ; ಸಚಿವ ಶಿವರಾಜ್ ತಂಗಡಗಿ ವಿರುದ್ಧ JDS ತೀವ್ರ ಕಿಡಿ

ಮಠದ ಜೀರ್ಣೋದ್ಧಾರಕ್ಕಾಗಿ 3.5 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಅನುದಾನ ಬಿಡುಗಡೆ ಮಾಡಲು ಸಚಿವ ಶಿವರಾಜ್ ತಂಗಡಗಿಯವರು 25 ಪರ್ಸೆಂಟ್​ ಕಮಿಷನ್​ ಕೇಳಿದ್ದಾರೆ ಎಂದು ಸ್ವಾಮೀಜಿ ಆರೋಪ ಮಾಡಿದ್ದಾರೆ.

ಗಾಣಿಗ ಮಠ ಅನುದಾನಕ್ಕೂ ಕಮಿಷನ್: ಸ್ವಾಮೀಜಿ ಆರೋಪ; ಸಚಿವ ಶಿವರಾಜ್ ತಂಗಡಗಿ ವಿರುದ್ಧ JDS ತೀವ್ರ ಕಿಡಿ
ಶಿವರಾಜ್ ತಂಗಡಗಿ
Published On :

ಬೆಂಗಳೂರು: ಗಾಣಿ ಮಠ ಅನುದಾನ ಬಿಡುಗಡೆಗೆ ಕಮಿಷನ್ ಕೇಳಿದ್ದಾರೆಂದು ಸಚಿವ ಶಿವರಾಜ್ ತಂಗಡಗಿ ವಿರುದ್ಧ ನೆಲಮಂಗಲದ ಶ್ರಿಕ್ಷೇತ್ರ ತೈಲೇಶ್ವರ ಗಾಣಿಗರ ಮಹಸಂಸ್ಥಾನ ಮಠದ ಪೂರ್ಣಾನಂದಪೂರಿ ಸ್ವಾಮೀಜಿಗಳು ಆರೋಪ ಮಾಡಿದ್ದು, ಇದರ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ತೀವ್ರವಾಗಿ ಕಿಡಿಕಾರಿದೆ.

ಮಠದ ಜೀರ್ಣೋದ್ಧಾರಕ್ಕಾಗಿ 3.5 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಅನುದಾನ ಬಿಡುಗಡೆ ಮಾಡಲು ಸಚಿವ ಶಿವರಾಜ್ ತಂಗಡಗಿಯವರು 25 ಪರ್ಸೆಂಟ್​ ಕಮಿಷನ್​ ಕೇಳಿದ್ದಾರೆ ಎಂದು ಸ್ವಾಮೀಜಿ ಆರೋಪ ಮಾಡಿದ್ದಾರೆ.

ಈ ಕುರಿತು ಖಾಸಗಿ ಸುದ್ದಿ ಸಂಸ್ಥೆಯೊಂದು ವರದಿ ಪ್ರಕಟಿಸಿದ್ದು, ವರದಿ ಬೆನ್ನಲ್ಲೇ ಜೆಡಿಎಸ್ ಸಚಿವರ ವಿರುದ್ಧ ತೀವ್ರವಾಗಿ ಕಿಡಿಕಾರಿದೆ.

ಕಮಿಷನ್ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರೇ ವಸೂಲಿ ಏಜೆಂಟ್'ಗಳಾಗಿದ್ದಾರೆ. ಗಾಣಿಗ ಮಠದ ಅನುದಾನ ಬಿಡುಗಡೆಗೆ ಸಚಿವ ಶಿವರಾಜ್ ತಂಗಡಗಿ ಕಮಿಷನ್ ಕೇಳಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿ ಪೂರ್ಣಾನಂದ ಪುರಿ ಸ್ವಾಮೀಜಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಭ್ರಷ್ಟ ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಆದಿಯಾಗಿ ಮಂತ್ರಿಗಳು, ಕಾಂಗ್ರೆಸ್ ಶಾಸಕರು ಲಂಚ‌ ಹೊಡೆಯುವುದರಲ್ಲೇ ನಿರತರಾಗಿದ್ದಾರೆ. ಇದು ಅಭಿವೃದ್ಧಿ ಶೂನ್ಯ ಶೇ.60 ಕಮಿಷನ್ ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿ ಎಂದು ವಾಗ್ದಾಳಿ ನಡೆಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.