NICE Road Accident: ತಡೆಗೋಡೆಗೆ ಟೆಂಪೋ ಢಿಕ್ಕಿ.. ವಾಹನ ಅರ್ಧಕ್ಕೆ ಪೀಸ್ ಪೀಸ್... ಸೇತುವೆ ಮೇಲಿಂದ ಬಿದ್ದ ಕ್ಯಾಬಿನ್! Video
ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ನೈಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ನೈಸ್ ರಸ್ತೆಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಟೆಂಪೊವೊಂದು ತಡೆಗೋಡೆಗೆ ಢಿಕ್ಕಿಯಾಗಿ ಅರ್ಧಕ್ಕೇ ಪೀಸ್ ಪೀಸ್ ಆದ ಘಟನೆ ನಡೆದಿದೆ.
ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ನೈಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅತಿವೇಗವಾಗಿ ಬಂದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ಕ್ಯಾಬಿನ್ ತುಂಡಾಗಿ ಮೇಲು ಸೇತುವೆಯಿಂದ ಕೆಳಗೆ ಬಿದ್ದು ಚಾಲಕ ಸೇರಿ ಮೂವರು ಗಾಯಗೊಂಡಿದ್ದಾರೆ.
ಜ್ಞಾನಭಾರತಿ ಬಳಿಯ ನೈಸ್ ರಸ್ತೆಯ ರಾಮಸಂದ್ರ ಸೇತುವೆ ಬಳಿ ಶನಿವಾರ ಮಧ್ಯಾಹ್ನ ಸುಮಾರು 1 ಗಂಟೆಗೆ ಘಟನೆ ನಡೆದಿದೆ ಎನ್ನಲಾಗಿದೆ.
ಟೆಂಪೋ ಚಾಲಕ ರಾಘವೇಂದ್ರ, ಸಹಾಯಕ ಸಲೀಂ ಮತ್ತು ಫಯಾಜ್ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಮೂವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.
ಬೆಡ್ ಗಳನ್ನು ತುಂಬಿಕೊಂಡು ಬರುತ್ತಿದ್ದ ಟೆಂಪೋ
ಮೂಲಗಳ ಪ್ರಕಾರ ಟೆಂಪೋ ಚಾಲಕ ರಾಘವೇಂದ್ರ, ಕಾಟನ್ ಹಾಗೂ ಬೆಡ್‌ಗಳನ್ನು ತುಂಬಿಕೊಂಡು ಬ್ಯಾಡರಹಳ್ಳಿ ಕಡೆಯಿಂದ ಕೆಂಗೇರಿ ಕಡೆ ಬರುತ್ತಿದ್ದರು. ಜ್ಞಾನಭಾರತಿ ಬಳಿಯ ನೈಸ್ ರಸ್ತೆಯ ರಾಮಸಂದ್ರ ಸೇತುವೆ ಬಳಿ ವೇಗವಾಗಿ ಟೆಂಪೋ ಚಾಲನೆ ಮಾಡಿದ ಪರಿಣಾಮ ನಿಯಂತ್ರಣ ತಪ್ಪಿ ಟೆಂಪೋ ರಸ್ತೆಯ ಬಲಭಾಗದ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಟೆಂಪೋವಿನ ಚಾಲಕನ ಕ್ಯಾಬಿನ್ ತುಂಡಾಗಿ ಮೇಲು ಸೇತುವೆಯಿಂದ ಕೆಳಗೆ ಬಿದ್ದಿದೆ. ಈ ವೇಳೆ ಚಾಲಕ ರಾಘವೇಂದ್ರ, ಆತನ ಸಹಾಯಕ ಸಲೀಂ ಮತ್ತು ಫಯಾಜ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಳಿಕ ಸ್ಥಳೀಯರು ಹಾಗೂ ಇತರೆ ವಾಹನಗಳ ಸವಾರರು ನೆರವಿಗೆ ದೌಡಾಯಿಸಿ ಮೂವರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸಂಚಾರ ಪೊಲೀಸರು ಪರಿಶೀಲಿಸಿದ್ದು, ಚಾಲಕ ರಾಘವೇಂದ್ರ ಅತೀವೇಗ ಹಾಗೂ ನಿರ್ಲಕ್ಷ್ಯದಿಂದ ಟೆಂಪೋ ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಈ ಸಂಬಂಧ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಚಾಲಕ ರಾಘವೇಂದ್ರನ ವಿರುದ್ಧ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



