ರಾಜ್ಯ

ಮೈಸೂರು: ವೇಗದ ಚಾಲನೆ; ಡೆಲಿವರಿ ಬಾಯ್‌ಗೆ ಹಯಾಬುಸಾ ಸೂಪರ್‌ಬೈಕ್ ಡಿಕ್ಕಿ, ಇಬ್ಬರು ಸಾವು!

ಸಿಸಿಟಿವಿ ದೃಶ್ಯಗಳಲ್ಲಿ ಅಪಘಾತದ ದೃಶ್ಯ ಸೆರೆಯಾಗಿದ್ದು, ವೇಗವಾಗಿ ಬಂದ ಹಯಾಬುಸಾ ಬೈಕ್ ರಸ್ತೆಬದಿಯಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಜೊಮ್ಯಾಟೊ ಡೆಲಿವರಿ ಬಾಯ್ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಮೈಸೂರು: ವೇಗದ ಚಾಲನೆ; ಡೆಲಿವರಿ ಬಾಯ್‌ಗೆ ಹಯಾಬುಸಾ ಸೂಪರ್‌ಬೈಕ್ ಡಿಕ್ಕಿ, ಇಬ್ಬರು ಸಾವು!
ಡೆಲಿವರಿ ಬಾಯ್ ಬೈಕ್‌ಗೆ ಡಿಕ್ಕಿ ಹೊಡೆದ ಹಯಾಬುಸಾ
Published On :

ಮೈಸೂರು: ಅತಿ ವೇಗವಾಗಿ ಬಂದ ಹಯಾಬುಸಾ ಸೂಪರ್‌ಬೈಕ್ ಜೊಮ್ಯಾಟೊ ಡೆಲಿವರಿ ಬಾಯ್‌ನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸಾವಿಗೀಡಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಜುಲೈ 6ರಂದು ಘಟನೆ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸಿಸಿಟಿವಿ ದೃಶ್ಯಗಳಲ್ಲಿ ಅಪಘಾತದ ದೃಶ್ಯ ಸೆರೆಯಾಗಿದ್ದು, ವೇಗವಾಗಿ ಬಂದ ಹಯಾಬುಸಾ ಬೈಕ್ ರಸ್ತೆಬದಿಯಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಜೊಮ್ಯಾಟೊ ಡೆಲಿವರಿ ಬಾಯ್ ಬೈಕ್‌ಗೆ ಡಿಕ್ಕಿ ಹೊಡೆದು ಮುಂದೆ ಹೋಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಮತ್ತು ಡೆಲಿವರಿ ಬಾಯ್ ಕೆಳಗೆ ಬಿದ್ದಿದ್ದಾನೆ.

ಜೊಮ್ಯಾಟೊ ಡೆಲಿವರಿ ಬಾಯ್ ಆಗಿದ್ದ ಕಾರ್ತಿಕ್ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

ಚಾಮರಾಜನಗರದ ಸೈಯದ್ ಸರೂನ್ ಸವಾರಿ ಮಾಡುತ್ತಿದ್ದ ಹಯಾಬುಸಾ, ಡಿಕ್ಕಿಯ ನಂತರವೂ ಹಲವಾರು ಮೀಟರ್‌ಗಳಷ್ಟು ಮುಂದೆ ಹೋಗಿ, ಪೆಟ್ರೋಲ್ ಸೋರಿಕೆಯಿಂದಾಗಿ ಬೆಂಕಿ ಹೊತ್ತಿಕೊಂಡಿದೆ.

ಕೂಡಲೇ ಸಯ್ಯದ್ ಸರೂನ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಆ ವೇಳೆಗಾಗಲೇ ಆತ ಸುಟ್ಟ ಗಾಯಗಳಿಂದ ಸಾವಿಗೀಡಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಈ ಸಂಬಂಧ ಎನ್ಆರ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.